ಬೆಂಗಳೂರು : ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧಿಸಿ ವರ್ಷಗಳೇ ಕಳೆದಿವೆ. ಆದರೆ ತಲಾಖ್ ಹೇಳುವವರ ಸಂಖ್ಯೆ ಮಾತ್ರ ಕಮ್ಮಿಯಾಗುವಂತೆ ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಇಂಥದ್ದೇ ಘಟನೆಯೊಂದು ನಡೆದಿದೆ. ಹೌದು ಪತಿ ಮಹಾಶಯನೊಬ್ಬ ಲಿಫ್ಟ್ನಲ್ಲಿ ಪತ್ನಿಗೆ ತಲಾಖ್ ನೀಡಿದ್ದಾನೆ. ಸದ್ಯ ಗಂಡನ ವಿರುದ್ಧ ಪತ್ನಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮೊಹಮ್ಮದ್ ಅಕ್ರಂ ಎಂಬಾತನ ವಿರುದ್ಧ ಆತನ ಪತ್ನಿ ಪೋಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರದಕ್ಷಿಣೆ ಕಿರುಕುಳ ಸೇರಿದಂತೆ ತ್ರಿವಳಿ ತಲಾಖ್ ನೀಡಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮದುವೆಗಯ ವೇಳೆ ತವರಿನವರು ಪತಿಗೆ ಒಟ್ಟು 30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೆ ಪತಿ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಒಡ್ಡಿದಾಗಿ ದೂರಿನಲ್ಲಿ ಹೇಳಲಾಗಿದೆ.
ಇದನ್ನೂ ಓದಿ : ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ-ಸಿದ್ದರಾಮಯ್ಯ
ತವರು ಮನೆಯವರ ಬಳಿ ಹಣ ಕೇಳಲಿಲ್ಲ ಎಂಬ ಕಾರಣಕ್ಕೆ ಹಿಂಸೆ ನೀಡುತ್ತಿದ್ದುದಾಗಿಯೂ ತಸ್ಮಿಯಾ ಹುಸೇನಿ ದೂರು ದಾಖಲಿಸಿದ್ದಾರೆ. ನಾನು ರಂಜಾನ್ ಹಬ್ಬಕ್ಕೆ ತವರಿಗೆ ಹೋದಾಗ ತನ್ನ ಗಂಡ 10 ಲಕ್ಷ ರೂಪಾಯಿ ತರಲು ಹೇಳಿದ್ದ. ಹಣ ತರದಿದ್ದಲ್ಲಿ ಮನೆಗೆ ಸೇರಿಸೋದಿಲ್ಲ ಎಂದಿದ್ದ. ಪತಿ ಬೇಡಿಕೆ ಇಟ್ಟಿದ್ದ ಹಣವನ್ನು ನೀಡುವುದು ಸಾಧ್ಯವಾಗಿರಲಿಲ್ಲ, ಆಗ ಅಪಾರ್ಟ್ಮೆಂಟ್ ಒಂದಕ್ಕೆ ಕರೆಸಿಕೊಂಡಿದ್ದ ಪತಿ, ಹಣ ನೀಡಿಲ್ಲ ಅಂದ್ರೆ ಮಂಗಳಸೂತ್ರ ಬಿಚ್ಚಿ ಕೊಡುವಂತೆ ಹೇಳಿದ್ದ. ಇದಕ್ಕೆ ನಾನು ಒಪ್ಪಲಿಲ್ಲ. ಅಪಾರ್ಟ್ಮೆಂಟ್ನಿಂದ ಲಿಫ್ಟ್ನಲ್ಲಿ ಹೋಗುತ್ತಿದ್ದಾಗ ಮೂರು ಬಾರಿ ತಲಾಖ್ ತಲಾಖ್ ತಲಾಖ್ ಎಂದು ಹೇಳಿ ಹೊರ ದಬ್ಬಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದ್ಯ ಪತಿ ಅಕ್ರಂ ವಿರುದ್ಧ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಇಂದಿನ ಈ ಸ್ಥಿತಿಗೆ ಸಿದ್ದರಾಮಯ್ಯನವರೇ ನೇರ ಕಾರಣಕರ್ತರು: ಬಿಜೆಪಿ ಆರೋಪ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.