ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲ ಆಡಿಯೋ ಸಾಬೀತಾದ ಬೆನ್ನಲ್ಲೇ ಮಾಜಿ ಮುಖ್ಯಮನತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಡೀ ದೇಶದ ಮುಂದೆ ಬಿಜೆಪಿ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಆಪರೇಷನ್ ಕಮಲದ ಆಡಿಯೋ ಸಂಭಾಷಣೆ ಆಘಾತಕಾರಿಯಾಗಿದೆ. ಇಡೀ ದೇಶದ ಮುಂದೆ ಬಿಜೆಪಿ ಬಣ್ಣ ಬಯಲಾಗಿದೆ. ಸ್ವಚ್ಛ ಬಿಜೆಪಿ ಕರ್ನಾಟಕದ ಸಜ್ಜನರು, ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಲೇವಡಿ ಮಾಡಿದ್ದಾರೆ.
'ಆಪರೇಷನ್ ಕಮಲ'ದ ಅಡಿಯೋ ಸಂಭಾಷಣೆ ಆಘಾತಕಾರಿಯಾಗಿದೆ. ಇಡೀ ದೇಶದ ಮುಂದೆ @BJP4India ಬಣ್ಣ ಬಯಲಾಗಿದೆ
ಸ್ವಚ್ಚ @BJP4Karnataka ದ ಸಜ್ಜನರು, ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ?#ಮಾತಾಡುಬಿಜೆಪಿಮಾತಾಡು.#OperationKamala— Siddaramaiah (@siddaramaiah) February 13, 2019
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆದು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಹಲವು ಬಾರಿ ಕೇಳಿಬಂದಿತ್ತು. ಆದರೆ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಅವರಿಗೆ ಹಣದ ಆಮಿಷ ಒಡ್ಡಿದ್ದ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡಲಾಗಿತ್ತು. ಬಳಿಕ ಆ ಧ್ವನಿ ತಮ್ಮದೇ ಎಂದು ಯಡಿಯೂರಪ್ಪ ಅವರೂ ಒಪ್ಪಿಕೊಂಡಿದ್ದರು. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳೆವಣಿಗೆಗಳಿಗೆ ಕಾರಣವಾಗಿದೆ.