ಎಲ್ಲರೂ ಶಾಂತಿಯುತವಾಗಿ ಶ್ರದ್ಧಾಂಜಲಿ ಸಲ್ಲಿಸಿ, ಅಭಿಮಾನಿಗಳಲ್ಲಿ ಡಿಸಿಎಂ ಮನವಿ

ಕಂಠೀರವ ಸ್ಟೇಡಿಯಂಗೆ ತೆರಳಿದ ಡಾ.ಜಿ. ಪರಮೇಶ್ವರ್‌ ಅವರು ಅಂಬರೀಶ್‌ ಅವರ ಪಾರ್ಥೀವ ಶರೀರದ ಅಂತಿಮ‌ ದರ್ಶನ ಪಡೆದು ಕಂಬನಿ ಮಿಡಿದರು.

Last Updated : Nov 25, 2018, 10:54 AM IST
ಎಲ್ಲರೂ ಶಾಂತಿಯುತವಾಗಿ ಶ್ರದ್ಧಾಂಜಲಿ ಸಲ್ಲಿಸಿ, ಅಭಿಮಾನಿಗಳಲ್ಲಿ ಡಿಸಿಎಂ ಮನವಿ  title=

ಬೆಂಗಳೂರು: ಎಲ್ಲರೂ ಶಾಂತಿಯುತವಾಗಿ ಶ್ರದ್ಧಾಂಜಲಿ ಸಲ್ಲಿಸಿ ಎಂದು ಅಂಬರೀಶ್  ಅಭಿಮಾನಿಗಳಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ.

ಕಂಠೀರವ ಸ್ಟೇಡಿಯಂಗೆ ತೆರಳಿದಅಂಬರೀಶ್‌ ಅವರ ಪಾರ್ಥೀವ ಶರೀರದ ಅಂತಿಮ‌ ದರ್ಶನ ಪಡೆದು ಡಾ.ಜಿ. ಪರಮೇಶ್ವರ್‌ ರಾಜ್ಯ ಹಾಗೂ ಮಂಡ್ಯದ ಪಾಲಿಗೆ ಇಂದು ಕರಾಳ ದಿನ. ಅಂಬರೀಶ್ ಅವರ ಕುಟುಂಬಕ್ಕೆ ಭಗವಂತ ನೋವನ್ನು ಸಹಿಸುವ ಶಕ್ತಿ ನೀಡಲಿ. ಚಿತ್ರರಂಗ ಹಾಗೂ ರಾಜ್ಯ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ ಎಂದು ಕಂಬನಿ ಮಿಡಿದಿದ್ದಾರೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರ ರಂಗ ಹಾಗೂ ರಾಜಕೀಯದಲ್ಲಿ ತನ್ನದೇ ವಿಶಿಷ್ಟ ಛಾಪು ಮೂಡಿಸಿದ ರೆಬಲ್‌ ಸ್ಟಾರ್‌ ಅಂಬರೀಶ್‌ ಅವರು ಇಂದು ನಮ್ಮನ್ನು ಅಗಲಿರುವುದು ಅತ್ಯಂತ ದುಃಖ ತರಿಸಿದೆ. ಹಿಂದೊಮ್ಮೆ ಆರೋಗ್ಯ ಸಮಸ್ಯೆಯಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಆಗಮಿಸಿದ್ದರು.‌ ರಾಜಕೀಯದಲ್ಲಿ ಎರಡು ಬಾರಿ ಕೇಂದ್ರ ಹಾಗೂ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು‌ ರಾಜಕೀಯದಲ್ಲಿ ಇನ್ನೂ ಉನ್ನತ ಸ್ಥಾನದಲ್ಲಿ ನೋಡುವ ಹಂಬಲವಿತ್ತು. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದ ವೇಳೆ ಅವರು ಉಪಾಧ್ಯಕ್ಷರಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಅವರ ಅಗಲಿಕೆ ನೋವನ್ನು ಸಹಸ್ರಾರು ಅಭಿಮಾನಿಗಳು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು.

ಅವರನ್ನು ಅಭಿಮಾನಿಗಳು ನಾವೆಲ್ಲರೂ ಶಾಂತಿಪೂರತವಕವಾಗಿ ಕಳುಹಿಸಿಕೊಡೋಣ. ಯಾರೂ ಸಹ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡದೇ ಅತ್ಯಂತ ವಿನಿಯದಿಂದ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಇದೇ ವೇಳೆ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡರು.
 

Trending News