ವಿಕ್ರಂ ಗೌಡ ಅವರದ್ದು ನಕಲಿ ಎನ್‌ಕೌಂಟರ್ ಅಲ್ಲ : ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಿ : ಜಿ.ಪರಮೇಶ್ವರ್
ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಬೆಂಗಳೂರು : ನಕ್ಸಲ್ ವಿಕ್ರಂಗೌಡ ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ ಎನ್‌ಕೌಂಟರ್ ಅಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಇದನ್ನೂ ಓದಿ : ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ ದಿನಾಂಕ ಫಿಕ್ಸ್
ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗತಿಯಾದರು. ಅದೇರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು ಎಂದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಮಹಾರಾಷ್ಟ್ರ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮತಗಟ್ಟೆ ಸಮೀಕ್ಷೆಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸಮೀಕ್ಷೆಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳು ಬರುತ್ತವೆ ಎಂದು ಹೇಳಿದ್ದು, ಬಿಜೆಪಿಯವರಿಗೆ 128 ಸೀಟು ಬರುತ್ತವೆ ಎಂದು ತಿಳಿಸಿವೆ. ಇನ್ನು ಕೆಲ ಸಮೀಕ್ಷೆಗಳು ಬಿಜೆಪಿಯವರಿಗೆ 140 ಬರುತ್ತವೆ ಎಂದು ಹೇಳಿವೆ. ಈಗಲೇ ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದರು.
ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ. ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.