Tumakuru Bus Accident: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಈ ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ RTO ಅಧಿಕಾರಿ ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತಾ ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

Written by - Zee Kannada News Desk | Last Updated : Mar 19, 2022, 11:43 PM IST
  • ತುಮಕೂರು ಜಿಲ್ಲೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ
  • ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ ಬಿ.ಶ್ರೀರಾಮುಲು
  • ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ RTO ಅಧಿಕಾರಿ ಸೇರಿ ಎಲ್ಲರ ವಿರುದ್ಧವೂ ಕಠಿಣ ಕ್ರಮದ ಎಚ್ಚರಿಕೆ
Tumakuru Bus Accident: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ title=
ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ(Private Bus Accident)ಯಾಗಿ ನಡೆದಿರುವ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.  

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು(B Sriramulu) ಈ ದುರ್ಘಟನೆ ನಡೆದಿರುವುದು ಬೇಸರದ ಸಂಗತಿ ಎಂದು ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂ. ಹಾಗೂ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಪರಿಹಾರವನ್ನು ಇದೇ ವೇಳೆ ಅವರು ಘೋಷಿಸಿದರು.   

RTO ಅಧಿಕಾರಿ ಸೇರಿ ಎಲ್ಲರ ವಿರುದ್ಧ ಕಠಿಣ ಕ್ರಮ   

ಈ ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ RTO ಅಧಿಕಾರಿ ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಉನ್ನತ ಅಧಿಕಾರಿಗಳ ತಂಡದಿಂದ ತನಿಖೆ ನಡೆಯುತ್ತಿದ್ದು, ವರದಿ ಬಂದಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಪಾವಗಡ(Pavagada)ದ ಎಲ್ಲಾ ಹಳ್ಳಿಗಳಿಗೆ ಸೂಕ್ತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಅಂತಾ ಹೇಳಿದ್ದಾರೆ.

ಪಾವಗಡವನ್ನು ಚಿತ್ರದುರ್ಗ KSRTC ವಿಭಾಗದಿಂದ ತುಮಕೂರು ವಿಭಾಗಕ್ಕೆ ವರ್ಗಾಯಿಸಲಾಗುವುದು. ಆಂಧ್ರ ಗಡಿಭಾಗದಲ್ಲಿ ಸಂಚರಿಸುವ ಕರ್ನಾಟಕ ವಾಹನಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಆಂಧ್ರ ಸಿಎಂ ಜೊತೆ ಮಾತಾಡಿ ಪರ್ಮಿಟ್ ಸಮಸ್ಯೆ ಬಗೆಹರಿಸುತ್ತೇನೆ. ಗಡಿಭಾಗದಲ್ಲಿ ಆಂಧ್ರಪ್ರದೇಶ ರಾಜ್ಯ RTOಗೆ ದಂಡ ಹಾಕದಂತೆ ಕ್ರಮವಹಿಸುತ್ತೇನೆ ಅಂತಾ ಶ್ರೀರಾಮುಲು ಹೇಳಿದ್ದಾರೆ.

ಇದನ್ನೂ ಓದಿ: Breaking News: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ 8 ಮಂದಿ ದುರ್ಮರಣ!

ದುರಂತ ಮರುಕಳಿಸದಂತೆ ಕ್ರಮ - ಸಿಎಂ

ತುಮಕೂರಿನ ಪಾವಗಡದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.   

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ಗಾಯಾಳುಗಳಿಗೆ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು(B Sriramulu)ಅವರನ್ನು ಕಳುಹಿಸಲಾಗಿದೆ. ದುರಂತ ಏಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಖಾಸಗಿ ವಾಹನಗಳ ಫಿಟ್‍ನೆಸ್ ಪ್ರಮಾಣಪತ್ರ ಇವುಗಳ ಬಗ್ಗೆ ಪರಿಶೀಲಿಸಲು ತಿಳಿಸಲಾಗಿದೆ. ಈ ರೀತಿಯ ದುರಂತ ಮರುಕಳಿಸದಂತೆ ಇನ್ನಷ್ಟು ಕ್ರಮವಹಿಸಲಾಗುವುದು ಇದೇ ವೇಳೆ ತಿಳಿಸಿದರು.   

ಇದನ್ನೂ ಓದಿ: Cylinder Blast: ಸಿಲಿಂಡರ್ ಬ್ಲಾಸ್ಟ್ ಆಗಿ ವ್ಯಕ್ತಿಗೆ ಗಂಭೀರ ಗಾಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News