ತುಮಕೂರು : ಇಡೀ ದೇಶವೇ ಎದುರು ನೋಡ್ತಾ ಇರುವ ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಏಪ್ರಿಲ್ 26ರಂದು ನಡೆದಿದ್ದ ಮತದಾನದ ಎಣಿಕೆ ಕಾರ್ಯಕ್ಕೆ ಕಲ್ಪತರು ನಾಡು ಸಹ ಸಿದ್ದಗೊಂಡಿದೆ.


COMMERCIAL BREAK
SCROLL TO CONTINUE READING

ರಾಜ್ಯದ ಪ್ರತಿಷ್ಠಿತ ಕಣಗಳಲ್ಲಿ ಕಲ್ಪತರು ನಾಡು ತುಮಕೂರು ಕೂಡಾ ಒಂದು.ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರ ರಾಜಕೀಯ ಭವಿಷ್ಯದ ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ  ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.  


ಇದನ್ನೂ ಓದಿ : ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ


ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ನಂತೆ ಒಟ್ಟು 112 ಟೇಬಲ್, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್ ಎಣಿಕೆಗಾಗಿ 19(18+1) ಟೇಬಲ್ ಸೇರಿದಂತೆ ಒಟ್ಟು 131 ಟೇಬಲ್ ಗಳಲ್ಲಿ  ಮತ ಎಣಿಕೆ ನಡೆಯುತ್ತಿದೆ. ಅಂಚೆ ಮತಪತ್ರಗಳ ಎಣಿಕೆಗಾಗಿ 2 ಕೊಠಡಿಯಲ್ಲಿ 18 ಎಣಿಕಾ ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ ಗೂ ತಲಾ ಒಬ್ಬರು ಸಹಾಯಕ ಚುನಾವಣಾ ಅಧಿಕಾರಿ ನೇಮಕ ಮಾಡಲಾಗಿದೆ. ಇದಕ್ಕಾಗಿ ಒಟ್ಟು 448 ಎಣಿಕಾ ಮೇಲ್ವಿಚಾರಕರು, ಎಣಿಕಾ ಸಹಾಯಕರು ಹಾಗೂ ವೀಕ್ಷಕರನ್ನು ನಿಯೋಜಿಸಲಾಗಿದೆ. 


ಎಣಿಕಾ ಕೇಂದ್ರಕ್ಕೆ ರಾಜ್ಯ ಪೊಲೀಸ್, ಕೆಎಸ್ಆರ್ಪಿ, ಸಿಎಪಿಎಫ್ ಸೇರಿದಂತೆ 3 ಸುತ್ತಿನ ಬಿಗಿ ಭದ್ರತೆ ಒದಗಿಸಲಾಗಿದೆ.300 ಮಂದಿ ಹೆಚ್ಸಿ/ಪಿಸಿ, 48 ಎಎಸ್ಐ, 29 ಪಿಎಸ್ಐ, 15 ಸಿಪಿಐ, 4 ಡಿವೈ.ಎಸ್ಪಿ, 1 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣಾ ಫಲಿತಾಂಶ  ಪ್ರಕಟವಾದ ನಂತರ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ.


ಇದನ್ನೂ ಓದಿ : Mandya Lok Sabha Election Result: ಯಾರ ಪಾಲಾಗಲಿದೆ ಮಂಡ್ಯ ಲೋಕಸಭಾ ಕ್ಷೇತ್ರ


ಗೆದ್ದವರು ಯಾವುದೇ ಮೆರವಣಿಗೆ, ವಿಜಯೋತ್ಸವಕ್ಕೆ ಅವಕಾಶ ಇಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ. ಇಷ್ಟೇ ಅಲ್ಲದೆ ಮತ ಏಣಿಕೆ ಸುತ್ತ ಸಂಚಾರವನ್ನು ನಿರ್ಬಂಧಿಸಲಾಗಿದೆ. ಡಾ: ಶಿವಕುಮಾರ ಸ್ವಾಮೀಜಿ ವೃತ್ತದಿಂದ ಬಟವಾಡಿ ಕಡೆಗೆ ಪಾದಚಾರಿ ಹಾಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಇಲ್ಲ. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನಡುವಿನ ಕುವೆಂಪು ನಗರ ರಸ್ತೆಯಲ್ಲೂ ಸಹ ವಾಹನ ಸಂಚಾರ ನಿರ್ಬಂಧ.ಎಣಿಕೆ ಕೇಂದ್ರ ಬರೋರು ಕುವೆಂಪು ನಗರದ ಕಡೆಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದ ಆವರಣದಲ್ಲಿ ಹಾಗೂ ಕೋತಿತೋಪು ರಸ್ತೆಯಲ್ಲಿ ವಾಹನಗಳ ನಿಲುಗಡೆ ಮಾಡಬಹುದಾಗಿದೆ. ಸರ್ಕಾರಿ ಪಾಲಿಟೆಕ್ನಿಕ್ ಹಿಂಭಾಗದ ಗೇಟ್ ಮೂಲಕ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ಎಣಿಕಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 


ಈಗಾಗಲೇ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು 340 ಎಣಿಕಾ ಏಜೆಂಟರುಗಳನ್ನು ನೇಮಕ ಮಾಡಲಾಗಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಮತ ಎಣಿಕೆ ನಡೆಸುವ ದೃಷ್ಟಿಯಿಂದ ಎಣಿಕಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಂಪೂರ್ಣ ಫಲಿತಾಂಶ ಮಧ್ಯಾಹ್ನದ ವೇಳೆ ಹೊರ ಬೀಳಲಿದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.