ಬೆಂಗಳೂರು: ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಅಂಗವಾಗಿ ಪ್ರಧಾನಿ ಮೋದಿಯವರು ಕನ್ನಡದಲ್ಲೇ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.


COMMERCIAL BREAK
SCROLL TO CONTINUE READING

‘ಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.


ಕಳಪೆ ಬೀಜ ಪೂರೈಸಿದ ಗಂಗಾ ಕಾವೇರಿ ಸೀಡ್ಸ್ ಕಂಪನಿಗೆ 1.25 ಲಕ್ಷ ರೂ ದಂಡ 


‘ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುತ್ತೇನೆ. ನಡೆದಾಡುವ ದೇವರು ಸಮಾಜ ಸೇವೆಗಳ ಮೂಲಕ ಅಪಾರ ಜನರ ಜೀವನ ಪರಿವರ್ತನೆಗೊಳಿಸಿದ್ದಾರೆ. ಹಲವು ಸಂಸ್ಥೆಗಳ ಮೂಲಕ ನಿಸ್ವಾರ್ಥ ಸೇವೆಯ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಅವರ ಕಾರ್ಯ ಮುಂದಿನ ಪೀಳಿಗೆಗಳಿಗೂ ಪ್ರೇರಣೆ ನೀಡಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.


ನಕಲಿ ಬಿಎಡ್ ಅಂಕಪಟ್ಟಿ ಪಡೆದು ವಾರ್ಡನ್ ಹುದ್ದೆಯಿಂದ ಪ್ರಾಂಶುಪಾಲ ಹುದ್ದೆಗೇರಿದ ಶಿಕ್ಷಕ


ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ‘ಅನ್ನ, ಅಕ್ಷರ, ಆಶ್ರಯದ ಮೂಲಕ ತ್ರಿವಿಧ ದಾಸೋಹಿಗಳಾಗಿ ನಾಡನ್ನು ಅರಿವಿನತ್ತ ಕೊಂಡೊಯ್ದ ಮಹಾನ್ ಸಂತರು, ದೈವ ಸ್ವರೂಪರೂ ಆಗಿರುವ ಶ್ರೀ ಸಿದ್ದಗಂಗಾ ಮಠದ ಲಿಂಗೈಕ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮೀಜಿಗಳವರ ಜಯಂತಿಯ ಈ ಪುಣ್ಯದಿನದಂದು ನನ್ನ ಶ್ರದ್ಧಾಭಕ್ತಿಯ ಪ್ರಣಾಮಗಳು’ ಎಂದು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.