ಬೆಂಗಳೂರು : ಆಮೀಷಕ್ಕೆ ಒಳಗಾಗದೆ ಸ್ವಯಿಚ್ಛೆಯಿಂದ ಎಲ್ಲರೂ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್  ಕರೆ ನೀಡಿದ್ದಾರೆ. ಮತ ಚಲಾವಣೆ ವೇಳೆ ಯಾವುದೇ ರೀತಿಯ ಆಮಿಷಗಳ ಬಗ್ಗೆ ಗಮನ ಹರಿಸದಂತೆ ಅವರು  ವಿದ್ಯಾರ್ಥಿಗಳಲ್ಲಿ ಹಾಗೂ ಎಲ್ಲಾ ಮತದಾರರಲ್ಲಿ ಮನವಿ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಮಹದೇವಪುರದ ಗುಂಜೂರು ಬಳಿಯಿರುವ ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಸ್ವಯಿಚ್ಛೆಯಿಂದ ಮುಂದೆ ಬಂದು ಮತದಾನ ಮಾಡಬೇಕೆಂದು ತಿಳಿಸಿದರು. 


ಇದನ್ನೂ ಓದಿ Lok Sabha Election 2024: "ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಶೇ 50 ಕ್ಕಿಂತಲೂ ಹೆಚ್ಚಳ"


ನಿಮಗೆ ಮತದಾನ ಮಾಡುವ ಮನಸ್ಸಿದ್ದು, ಅದರ ಬಗ್ಗೆ ಅರಿವಿಲ್ಲ ಎಂದಾದರೆ ಎಲ್ಲರೂ ಮೊದಲು ಮಾಡಬೇಕಾಗಿರುವ ಕೆಲಸ ವೋಟರ್ ಹೆಲ್ಪ್ ಲೈನ್ ತಂತ್ರಾಂಶವನ್ನು ಡೌನ್ಲೋಡ್ ಮಾಡಿಕೊಳ್ಳುವುದು. ನಂತರ ತಂತ್ರಾಂಶದಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿದರೆ ಸಾಕು ಎಲ್ಲಾ ಮಾಹಿತಿ ನಿಮಗೆ ಸಿಗಲಿದೆ ಎಂದು ಮಾಹಿತಿ ನೀಡಿದರು. 


ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದು, ನೀವು ಮತದಾನ ಮಾಡದಿರುವುದು ತಪ್ಪಾಗುತ್ತದೆ. ಇನ್ನು ನೀವು ಆಮೀಷಕ್ಕೊಳಗಾಗಿ ಮತದಾನ ಮಾಡಿದರೆ ಅದು ಅಪರಾಧವಾಗಲಿದೆ. ನಿಮಗೆ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿವೇಚನೆಯಿದ್ದು, ವಿವೇಚನೆಯಿಂದಲೇ ಮತದಾನ ಮಾಡುವಂತೆ ಹೇಳಿದರು. 


ಚುನಾವಣೆ ಸುಗಮವಾಗಿ ನಡೆಯಲು ಅಧಿಕಾರಿಗಳ ನಿಗಾ:
ಚುನಾವಣೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಎಲ್ಲಾ ಕಡೆ ನಿಗಾವಹಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ. ನಿಮಗೇನಾದರು ಆಮೀಷದ ಕುರಿತು ಮಾಹಿತಿ ಲಭ್ಯವಾದಲ್ಲಿ ಕೂಡಲೆ ಸಿವಿಜಿಲ್ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. 


ಇದನ್ನೂ ಓದಿ : Chamarajanagar: ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ: ಕುಟುಂಬದೊಟ್ಟಿಗೆ ವ್ಯಕ್ತಿ ಪ್ರತಿಭಟನೆ 


ನಿಮ್ಮ ಊರುಗಳಿಗೆ ತೆರಳಿ ಮತದಾನ ಮಾಡಿ:
ನಿಮ್ಮ ಮತ ಬೆಂಗಳೂರಿನಲ್ಲಿ ಇಲ್ಲವಾದರೆ ನಿಮ್ಮ ಊರುಗಳಿಗೆ ತೆರಳಿ ಮತದಾನ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಗೌರವ ತರುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮತದಾನದ ದಿನ ತಮ್ಮ-ತಮ್ಮ ಊರುಗಳಿಗೆ ತೆರಳಿ ತಪ್ಪದೆ ಮತದಾನ ಮಾಡಲು ಕೋರಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.