ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರನ್ನು ಏಕಾಂಗಿ ಎಂದು ಪದೇ ಪದೇ ಟೀಕಿಸುತ್ತಿದ್ದಾರೆ. ಇದಕ್ಕೆ ಈ ಮೊದಲೂ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ನಾನು ಕಾಂಗ್ರೆಸ್‌ನಲ್ಲಿ ಏಕಾಂಗಿಯಲ್ಲ. ಕಾಂಗ್ರೆಸ್ ಪಕ್ಷ ಯಾವತ್ತು ಯಾರನ್ನು ಏಕಾಂಗಿ ಮಾಡಲ್ಲ ಎಂದಿದ್ದರು. ಆದಾಗ್ಯೂ, ನಿನ್ನೆ ಕೂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ(DV Sadanandagowda) ರು ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಮತ್ತೆ ದಾಳಿ ನಡೆಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ @DVSadanandGowda ಬಗ್ಗೆ ಅನುಕಂಪವಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಏಕಾಂಗಿ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ ಉತ್ತರಿಸಿರುವ ಮಾಜಿ ಸಿಎಂ, ರಾಜ್ಯದ
@BJP4Karnataka ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು @narendramodi ಮತ್ತು @AmitShah ಭರವಸೆ ನೀಡಿದ ಹಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದೂ ಕೂಡ ಪ್ರಶ್ನಿಸಿದ್ದಾರೆ.
ಮೋದಿಗೆ ನನ್ನನ್ನು ಕಂಡರೆ ಭಯ: ಸಿದ್ದರಾಮಯ್ಯ
ಇದರ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ(Sadananda gowda)ರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ @DVSadanandGowda ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ 'ಗೊಬ್ಬರ'ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ.
ಆಗ 10 ವರ್ಷ ಕೇಂದ್ರದಲ್ಲೊಂದು ಕೈಗೊಂಬೆ, ಈಗ ಕರ್ನಾಟಕದಲ್ಲಿ ಹೊಸ ಕೈಗೊಂಬೆ; ಡಿವಿಎಸ್
ಏಕಾಂಗಿಯಾಗಿ ಹೋಗಿರುವ @DVSadanandGowda ಅವರನ್ನು @BJP4Karnataka ದಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ.
ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
ನನ್ನದು ನಗು ಮುಖ, ನನ್ನ ಆಲೋಚನೆಗಳು ಧನಾತ್ಮಕ: ಟ್ವೀಟ್ ಮೂಲಕ ಸದಾನಂದಗೌಡ ಟಾಂಗ್
ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿರುವ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ,
ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ
ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ
ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ
ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?
ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ
ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು
ನಾನು ಗೊಬ್ಬರ ಹೌದು
ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಬರೆದಿದ್ದಾರೆ.