Nandini Ghee: ಟೆಂಡರ್ ಉದ್ದೇಶಕ್ಕೆ ನಷ್ಟಕ್ಕೆ ಗುರಿಯಾಗುವ ಅಗತ್ಯವಿಲ್ಲ- ಕಾಂಗ್ರೆಸ್

Nandini ghee for Tirupati laddus: ನಂದಿನಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಯಾವ ಟೆಂಡರ್ ಕೈತಪ್ಪಿದರೂ ನಷ್ಟವಾಗುವುದಿಲ್ಲವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Written by - Puttaraj K Alur | Last Updated : Jul 31, 2023, 08:50 PM IST
  • ತಿರುಪತಿ ಲಾಡು ತಯಾರಿಕೆಗೆ ರಾಜ್ಯದ ಕೆಎಂಎಎಫ್ ನಂದಿನಿ ತುಪ್ಪ ಪೂರೈಕೆ ಬಂದ್ ವಿಚಾರ
  • ನಂದಿನಿ ತುಪ್ಪಕ್ಕೆ ಮಾರುಕಟ್ಟೆಯಲ್ಲಿತನ್ನದೇ ಆದ ಸ್ಥಾನವಿದೆ, ಉತ್ತಮ ಹೆಸರಿದೆ
  • ಗುಣಮಟ್ಟದಲ್ಲೂ ರಾಜಿಯಾಗುವುದಿಲ್ಲ, ಬೆಲೆಯಲ್ಲೂ ರಾಜಿಯಾಗುವುದಿಲ್ಲವೆಂದ ಕಾಂಗ್ರೆಸ್
Nandini Ghee: ಟೆಂಡರ್ ಉದ್ದೇಶಕ್ಕೆ ನಷ್ಟಕ್ಕೆ ಗುರಿಯಾಗುವ ಅಗತ್ಯವಿಲ್ಲ- ಕಾಂಗ್ರೆಸ್ title=
ತಿರುಪತಿ ಲಾಡು ತಯಾರಿಕೆಗೆ ನಂದಿನಿ ತುಪ್ಪ!

ಬೆಂಗಳೂರು: ತಿರುಪತಿ ಲಾಡು ತಯಾರಿಕೆಗೆ ರಾಜ್ಯದ ಕೆಎಂಎಎಫ್ ನಂದಿನಿ ತುಪ್ಪ ಪೂರೈಕೆ ಬಂದ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ತಿರುಪತಿ ಲಾಡು ತಯಾರಿಗೆ ನಂದಿನಿ ತುಪ್ಪ ಪೂರೈಕೆ ನಿಲ್ಲಿಸಿರುವುದನ್ನು ಸಮರ್ಥಿಸಿಕೊಂಡಿದೆ. ‘ನಮ್ಮ ಹೆಮ್ಮೆಯ “ನಂದಿನಿ“ಗೆ ಮಾರುಕಟ್ಟೆಯಲ್ಲಿತನ್ನದೇ ಆದ ಸ್ಥಾನವಿದೆ, ಉತ್ತಮ ಹೆಸರಿದೆ. ಗುಣಮಟ್ಟದಲ್ಲೂ ರಾಜಿಯಾಗುವುದಿಲ್ಲ, ಬೆಲೆಯಲ್ಲೂ ರಾಜಿಯಾಗುವುದಿಲ್ಲ’ ಎಂದು ಹೇಳಿದೆ.

‘ಟೆಂಡರ್ ಪಡೆಯಬೇಕು ಎಂಬ ಒಂದೇ ಉದ್ದೇಶಕ್ಕಾಗಿ ಬೆಲೆಯಲ್ಲಿ ರಾಜಿ ಮಾಡಿಕೊಂಡು ನಷ್ಟಕ್ಕೆ ಗುರಿಯಾಗುವ ಅಗತ್ಯವಿಲ್ಲ. ನಂದಿನಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಯಾವ ಟೆಂಡರ್ ಕೈತಪ್ಪಿದರೂ ನಷ್ಟವಾಗುವುದಿಲ್ಲ’ವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Crime : ಬೈಕ್ ಕೀಗಾಗಿ ಜಗಳ: ಬಿತ್ತು ಒಬ್ಬನ ಹೆಣ

ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ!

‘ಚುನಾವಣೆಗೂ ಮುನ್ನ ನಂದಿನಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಇಂದು ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ. ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರಕ್ಕೆ ಬಂದಾಗ ಲಾಭ-ನಷ್ಟದ ಲೆಕ್ಕ ಹೇಳುವ ಕಾಂಗ್ರೆಸ್‌ ಇದೇ ಸೂತ್ರವನ್ನು ಇತರ ಧರ್ಮಗಳಿಗೆ ಅನ್ವಯಿಸಲು ಒಪ್ಪುವುದಿಲ್ಲ. ಹಿಂದೂಗಳೆಡೆಗೆ ತಾತ್ಸಾರ ತಮ್ಮ ಜಾತ್ಯಾತೀತ ಸೂತ್ರ ಎಂಬುದನ್ನು ಸಿದ್ದರಾಮಯ್ಯನವರು ಈಗ ಮತ್ತೆ ರುಜುವಾತು ಮಾಡಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ‌ ಖೋಟಾನೋಟು ಹಾವಳಿ: ನಕಲಿ ನೋಟು ಜಪ್ತಿ,ಮೂವರು ಅಂದರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News