ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ.ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.ಬಂಧಿತರನ್ನು ಭವೀಶ್ ಬಸ್ತಿಪಡ್ಪು, ಜೀತು ಎಂದು ಗುರುತಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ


ಇದಕ್ಕಿಂತ ಮುಂಚೆಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹೇನ್ ತಲಪಾಡಿ ,ಅಖಿಲ್ ತಲಪಾಡಿ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು.ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ವೇಳೆ  ಕೇರಳ ಮೂಲದ ಆರು ಮಂದಿ  ವಿಹಾರಕ್ಕೆಂದು‌ ಬಂದಿದ್ದರು.ಇವರಲ್ಲಿ ಮೂವರು ಯುವತಿಯರ ಜತೆ ಇದ್ದ ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಸಂಶಯದ ಮೇಲೆ ತಂಡವೊಂದು ಇವರನ್ನು ಹಿಂಬಾಲಿಸಿ ಹಲ್ಲೆ ನಡೆಸಿತ್ತು.


ಇದನ್ನೂ ಓದಿ: ಜುಲೈ 1ರಿಂದ ಅನ್ನಭಾಗ್ಯ ಯೋಜನೆ ಜಾರಿ: ಸಿದ್ದರಾಮಯ್ಯ


ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ಈ ಕೃತ್ಯ ಎಸಗಿದ್ದು ಇದರಿಂದ ಮೂವರು  ಯುವಕರು ಗಾಯಗೊಂಡಿದ್ದು,ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.