ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ 10 ರಿಂದ 14 ರವರೆಗೆ ಅದ್ಧೂರಿಯಾಗಿ ದೀಪಾವಳಿ ಜಾತ್ರೆ ನಡೆದಿದ್ದು ಕೇವಲ 5 ದಿನಗಳ ಅವಧಿಯಲ್ಲಿ ಕ್ಷೇತ್ರಕ್ಕೆ 2.8 ಕೋಟಿ ರೂ. ಆದಾಯ ಹರಿದು ಬಂದಿದೆ.


COMMERCIAL BREAK
SCROLL TO CONTINUE READING

ಹೌದು, ಶ್ರೀಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಈ ಸಂಬಂಧ ಮಾಹಿತಿ ನೀಡಿದ್ದು, ಜಾತ್ರಾ ಮಹೋತ್ಸವಕ್ಕೆ  ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಐದು ದಿನಗಳ ಅವಧಿಯಲ್ಲಿ 2.8 ಕೋಟಿ ಆದಾಯ ಹರಿದು ಬಂದಿದೆ ಎಂದಿದ್ದಾರೆ. 


ಮಲೆಮಹದೇಶ್ವರ ಬೆಟ್ಟದಲ್ಲಿ ಚಿನ್ನದ ರಥ ಸೇವೆ, ರುದ್ರಾಕ್ಷಿ ವಾಹನ, ಬೆಳ್ಳಿ ರಥ, ಲಾಡು ಮಾರಾಟ, ಮಿಶ್ರ ಪ್ರಸಾದ ಮಾರಾಟ, ಪಾರ್ಕಿಂಗ್, ವಿಶೇಷ ದರ್ಶನದ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳಿಂದ 2,08,82,110 ರೂ. ಆದಾಯ ಬಂದಿದ್ದು  ಇದರಲ್ಲಿ ಹುಂಡಿ ಹಣ ಸೇರಿಲ್ಲ.


ಇದನ್ನೂ ಓದಿ- ಕಂಬದಿಂದ ವಿದ್ಯುತ್ ಸಂಪರ್ಕ: ಅಚಾತುರ್ಯಕ್ಕೆ ನನ್ನ ವಿಷಾದವಿದೆ , ದಂಡ ಕಟ್ಟುವೆ ಎಂದ ಕುಮಾರಸ್ವಾಮಿ


ಯಾವ ಸೇವೆಯಿಂದ ಎಷ್ಟು ಹಣ: 
ಐದು ದಿನಗಳ ಅವಧಿಯಲ್ಲಿ 1786 ಚಿನ್ನದ ರಥೋತ್ಸವ, 50 ಬೆಳ್ಳಿ ರಥೋತ್ಸವ, 1114 ಬಸವ ವಾಹನ, 9135 ಹುಲಿ ವಾಹನ, 410 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಸಿದ್ದಾರೆ. ಇನ್ನು ಮಲೆ ಮಹದೇಶ್ವರ ಹುಲಿವಾಹನ ಉತ್ಸವಕ್ಕೆ ಅತಿ ಹೆಚ್ಚು ಭಕ್ತರು ಎಳೆದಿದ್ದಾರೆ. ಈ ಉತ್ಸವಗಳಿಂದಲೇ 86 ಲಕ್ಷ ರೂ.  ಹಣ ಪ್ರಾಧಿಕಾರಕ್ಕೆ ಸಂದಾಯವಾಗಿದೆ.


ಇನ್ನು, ಲಾಡು ಮಾರಾಟದಿಂದ 54 ಲಕ್ಷ, ಮಿಶ್ರ ಪ್ರಸಾದದಿಂದ 8 ಲಕ್ಷ, ಪುದುವಟ್ಟು ಸೇವೆಯಿಂದ 2 ಲಕ್ಷ, ಸೇವೆಗಳಿಂದ 5 ಲಕ್ಷ, ಪ್ರಸಾದದ ಕ್ಯಾರಿ ಬ್ಯಾಗ್ ನಿಂದಲೇ  72 ಸಾವಿರ ಹಣ ಬಂದಿದ್ದು ಒಟ್ಟಾರೆ 5 ದಿನದ ಅವಧಿಯಲ್ಲಿ ಕ್ಷೇತ್ರಕ್ಕೆ 2,08,82,110 ರೂ ಆದಾಯ ಬಂದಿದೆ.


10 ಸಾವಿರ ಮಂದಿ ಪಾದಯಾತ್ರಿಗಳಿಗೆ ಪಾಸ್: 
ತಿರುಪತಿ ಮಾದರಿಯಲ್ಲಿ ಕಾಲ್ನಡಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಬರುವ ಪಾದಯಾತ್ರೆಗಳಿಗೆ ಉಚಿತ ದರ್ಶನ, ವಸತಿ ಹಾಗೂ ದಾಸೋಹದ ಪಾಸ್ ವ್ಯವಸ್ಥೆ ಕಲ್ಪಿಸಲಾಗಿತ್ತು ಸುಮಾರು 10600ಕ್ಕೂ ಹೆಚ್ಚು ಕಾಲ್ನಡಿಗೆ ಭಕ್ತಾದಿಗಳು ಈ ಪಾಸ್ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ- ಮಹಿಳೆಯರೇ ಗುಡ್‌ ನ್ಯೂಸ್‌..! ಇನ್ಮುಂದೆ ಮೊಬೈಲ್‌ನಲ್ಲೇ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಿ


ಒಟ್ಟಿನಲ್ಲಿ ದೀಪಾವಳಿ ಜಾತ್ರೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ಮಲೆ ಮಹದೇಶ್ವರನ ದರ್ಶನ ಪಡೆಯುವ ಜೊತೆಗೆ ಕೋಟ್ಯಾಂತರ ರೂ. ಆದಾಯವನ್ನು ಕ್ಷೇತ್ರಕ್ಕೆ ಕೊಟ್ಟಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.