)
Belagavi Road Accident: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂರು ಯುವಕರ ಪೈಕಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಭೀಕರ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆಗೆ ಬರುವಾಗ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಗ್ರಾಮದ ಬಳಿ ಈ ರಸ್ತೆ ಅಪಘಾತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ಸಚಿನ್ ಯಲ್ಲಪ್ಪ ಬೋರಿಮರದ, ಬಾಲಕೃಷ್ಣ ಬಸಪ್ಪ ಸುಲದಾಳ ಸಾವನ್ನಪ್ಪಿದ ಯುವಕರು ಎಂದು ವರದಿಯಾಗಿದೆ.
ಬೆಳಗಾವಿ ಮತ್ತು ಬಾಗಲಕೋಟ ರಾಜ್ಯ ಹೆದ್ದಾರಿ ಮಾರ್ಗದಲ್ಲಿ ಸೋಮನಟ್ಟಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದು, ಉಳಿದ ಇನ್ನೊಬ್ಬ ಯುವಕನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸಾವನ್ನಪ್ಪಿದ ಇಬ್ಬರು ಯುವಕರು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಎಲ್ಲರೂ ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ ಯುವಕರು ಎನ್ನುವ ಮಾಹಿತಿ ಲಭ್ಯವಾಗಿದೆ.
ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದ ಸ್ಥಳಕ್ಕೆ ಡಿವೈಎಸ್ಪಿ ಡಾ ವೀರಯ್ಯ ಹಿರೇಮಠ, ಪಿಐ ಗಜಾನನ ನಾಯ್ಕ ,ಪಿಎಸ್ ಐ ಈರಪ್ಪ ರಿತ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.