ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

Written by - Manjunath N | Last Updated : Sep 11, 2024, 08:42 PM IST
  • ಬಸವನಗೌಡ ಎಂಬುವರಿಂದ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತ ಕ್ಲಿನಿಕ್ ನಡೆಸುತ್ತಾ ಬಂದಿದ್ದರು
  • ಇದು ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ
ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ title=
Photo: Meta AI

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಇದನ್ನೂ ಓದಿ- ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ತಂದೆ ತಿಮ್ಮಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ಎಂದು ಪರವಾನಗಿ ಪಡೆದು ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದನು.ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ಒಂದು ಲಕ್ಷ ದಂಡ ವಿಧಿಸಲಾಗಿದೆ.

ಇದನ್ನೂ ಓದಿ- ಪುಷ್ಪ ರಾಜ್ ಹಾಡಿಗೆ ರೀಲ್ಸ್  ಮಾಡಿ ಶೇರ್ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್: ವೈರಲ್ ವಿಡಿಯೋಗೆ ನೆಟ್ಟಿಗರು ಏನಂದ್ರು? 

ಮತ್ತೊಬ್ಬ ನಕಲಿ ವೈದ್ಯ ಹಿರೇಕೇರೂರು ತಾಲ್ಲೂಕಿನ ಹಿರೇ ಮರಬ ಗ್ರಾಮದ 45 ವರ್ಷದ ಲಕ್ಷ್ಮಣ ಬಿನ್ ಫಕ್ಕೀರಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ದೇವಸ್ಥಾನದ ಹತ್ತಿರ ಬಸವನಗೌಡ ಎಂಬುವರಿಂದ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತ ಕ್ಲಿನಿಕ್ ನಡೆಸುತ್ತಾ ಬಂದಿದ್ದರು. ತಪಾಸಣೆ ವೇಳೆ ಬಿಇಎಂಎಸ್ ಪ್ರಮಾಣ ಪತ್ರ ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದು ಇದು ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.

ಈ ನಕಲಿ ಕ್ಲಿನಿಕ್ ಗಳ ಬಗ್ಗೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಶೇಕ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಸ್ಥಳ ಮಹಾಜರು ಮಾಡಿ ಸಮಗ್ರ ವರದಿ ನೀಡಿದ್ದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯೊಂದಿಗೆ ಕ್ರಮಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News