ಕರ್ನಾಟಕ-ತಮಿಳುನಾಡು ಗಡಿಯಲ್ಲಿ 2 ತಾಸು ಟ್ರಾಫಿಕ್ ಜಾಂ; ವಾಹನ ಸವಾರರ ಪರದಾಟ
ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಂ.
Traffic Jam: ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳುನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಮೀಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದರು.
ಇದನ್ನೂ ಓದಿ- ಸರ್ಕಾರಿ ಶಾಲೆಗಳಿಗೆ ದೇಣಿಗೆ ನೀಡಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ-ಸಚಿವ ಮಧು ಬಂಗಾರಪ್ಪ
ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂ ನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿರುವ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು.
ಇದನ್ನೂ ಓದಿ- ಮುಡಾ ಹಗರಣದಂತೆ ಬಿಡಿಎ ಹಗರಣ ಕೂಡ ನಿಮ್ಮ ಕೊರಳಿಗೆ ಸುತ್ತಿಕೊಳ್ಳಲಿದೆ: ಸಿಎಂ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ
ಆ್ಯಂಬುಲೆನ್ಸ್ ಗಳು ಸೇರಿದಂತೆ ಹಲವು ವಾಹನಗಳು ಕಿಮೀಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಫಜೀತಿ ಅನುಭವಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.