ಬುರ್ಖಾ ವೀಡಿಯೋ ವೈರಲ್ ಕೇಸ್: ಎರಡು ತನಿಖಾ ತಂಡ ರಚನೆ

Burka Video Viral Case: ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬುರ್ಖಾ ಬಗ್ಗೆ ಮಹತ್ವ ಸಾರುವ  ಪ್ರದರ್ಶನ ಆಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ‌.

Written by - Yashaswini V | Last Updated : Mar 24, 2025, 08:28 PM IST
  • ಖಾಸಗಿ ಶಾಲೆಯೊಂದರಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬುರ್ಖಾ ಬಗ್ಗೆ ಮಹತ್ವ ಸಾರುವ ಪ್ರದರ್ಶನ

    ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
  • ವಿಡಿಯೋ ವೈರಲ್ಲಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ
ಬುರ್ಖಾ ವೀಡಿಯೋ ವೈರಲ್ ಕೇಸ್: ಎರಡು ತನಿಖಾ ತಂಡ ರಚನೆ

Burka Video Viral Case: ಶಾಲೆಯಲ್ಲಿ ಧರ್ಮಾಧರಿತ ವಿಚಾರಗಳಿಗೆ ಉತ್ತೇಜನ, ಬುರ್ಖಾ ಧರಿಸಲು ಪ್ರೇರಣೆ ನೀಡುವಂತೆ ಬಾಲಕಿ ಮಾತನಾಡಿರುವ ವೀಡಿಯೋ ಕೇಸ್ ಸಂಬಂಧಿಸಿದಂತೆ ಎರಡು ತನಿಖಾ ತಂಡ ರಚನೆ ಮಾಡಿ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಆದೇಶ ನೀಡಿದ್ದಾರೆ. 

Add Zee News as a Preferred Source

ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬುರ್ಖಾ ಬಗ್ಗೆ ಮಹತ್ವ ಸಾರುವ  ಪ್ರದರ್ಶನ ಆಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ‌. ಮಕ್ಕಳ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಧರ್ಮದ ವಿಚಾರ ಏಕೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ- ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿಕೆ ಶಿವಕುಮಾರ್

ಇನ್ನು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆಯು ಚಾಮರಾಜನಗರ ಬಿಇಒ ಹನುಮಂತಶೆಟ್ಟಿ ನೇತೃತ್ವದಲ್ಲಿ ಒಂದು ತಂಡ ಹಾಗೂ ಡಿಡಿಪಿಐ ಅಧಿಕಾರಿಗಳ ತಂಡ ರಚನೆ ಮಾಡಲಾಗಿದ್ದು ಈಗಾಗಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ವೀಡಿಯೋದಲ್ಲಿ ಏನಿದೆ..? 
ವೀಡಿಯೋದಲ್ಲಿ 4ನೇ ತರಗತಿ ಬಾಲಕಿಯೊಬ್ಬಳು ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ, ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು ಚೇಳು ತಿನ್ನುತ್ತವೆ ಎಂದು ಬಾಲಕಿ ಹೇಳಿದ್ದಾಳೆ.

ಇದನ್ನೂ ಓದಿ- ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಇನ್ನು, ಪ್ರಾಥಮಿಕ ತನಿಖೆಯಲ್ಲಿ ಮಾತನಾಡಿರುವ ಬಾಲಕಿಯು ಹುದಾ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಶಾಲೆಯಲ್ಲಿ ಬಾಲಕಿ ಈ ರೀತಿ ಮಾತನಾಡಿಲ್ಲ ಎಂದು ಶಾಲಾ ಮಂಡಳಿಯು ವಿಚಾರಣೆ ವೇಳೆ ಸಮಜಾಯಿಷಿ ಕೊಟ್ಟಿದೆ.

ಒಟ್ಟಿನಲ್ಲಿ ಜಾತ್ಯಾತೀತ, ಧರ್ಮಾತೀತವಾಗಿ ಇರಬೇಕಿದ್ದ ಶಿಕ್ಷಣ ಸಂಸ್ಥೆ ವಿವಾದಕ್ಕೆ ಎಡೆ ಮಾಡಿಕೊಟ್ಟಿರುವುದು ನಿಜಕ್ಕೂ ವಿಪರ್ಯಾಸವಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News