ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಮದುಮಗ ಸೇರಿ ಇಬ್ಬರು ಸಾವು

ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮದುಮಗ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ (Kalburgi) ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ನಡೆದಿದೆ.

Last Updated : Apr 7, 2022, 09:09 PM IST
  • ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮದುಮಗ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ (Kalburgi) ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ನಡೆದಿದೆ.
ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಮದುಮಗ ಸೇರಿ ಇಬ್ಬರು ಸಾವು title=

ಕಲಬುರ್ಗಿ: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮದುಮಗ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ (Kalburgi) ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ನಡೆದಿದೆ.

ಈ ದುರಂತದಲ್ಲಿ ಮೃತಪಟ್ಟಿರುವವರನ್ನು ಯಡ್ರಾಮಿ ತಾಲೂಕಿನ ವಸ್ತಾರಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ಕೋಣಸಿರಸಗಿ ಗ್ರಾಮದ ಗುರುರಾಜ (30) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Career: ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೋರ್ಸ್ : ಅರ್ಜಿ ಆಹ್ವಾನ

ಇದರಲ್ಲಿ ದೇವೇಂದ್ರಪ್ಪ ಎನ್ನುವವರ ಮದುವೆ ಎಪ್ರಿಲ್ 17 ರಂದು ನಿಶ್ಚಯವಾಗಿತ್ತು.ಈ ಹಿನ್ನಲೆಯಲ್ಲಿ ಅವರು ತಮ್ಮ ಸಂಬಂಧಿಕರಿಗೆ ಮದುವೆಯ ಆಹ್ವಾನ ಪತ್ರವನ್ನು ನೀಡಲು ಜೇರಟಗಿಯತ್ತ ಬೈಕ್ ಮೇಲೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಓವರಟೇಕ್ ಮಾಡಿಕೊಂಡ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿರುವ ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 'ಕೆಜಿಎಫ್‌-2' ಟಿಕೆಟ್‌ ಯಾವಾಗ ಸಿಗುತ್ತೆ..? ಬುಕಿಂಗ್‌ ಬಗ್ಗೆ ಇಲ್ಲಿದೆ ಡೀಟೇಲ್ಸ್..!

ಈ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News