Bengaluru:ಸಿಲಿಕಾನ್ ಸಿಟಿಯಲ್ಲಿ ಜೀವಂತ ಮೊಸಳೆ ಮರಿ ಮಾರಾಟಕ್ಕೆ ಯತ್ನಿಸಿದವರ ಬಂಧನ
ಶಿವನಸಮುದ್ರ ಸಮೀಪದ ಕಾವೇರಿ ನದಿಯಿಂದ ಮರಿಗಳನ್ನು ತಂದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಜೀವಂತ ಮೊಸಳೆ ಮರಿ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ದಕ್ಷಿಣ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಮೊಸಳೆ ಮರಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಮೊಸಳೆ ಮರಿಯನ್ನು (Crocodile) ಸಾಕು ಪ್ರಾಣಿ ಎಂದು ಹೇಳಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಬ್ದುಲ್ ಖಾಲಿದ್ (Abdul Khalid) ಮತ್ತು ಬಿಎಸ್ ಗಂಗಾಧರ್ (BS Gangadhar) ಎಂಬ ಆರೋಪಿಗಳನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಈಶ್ವರಿ ಥಿಯೇಟರ್ ಸಮೀಪ ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ- Karnataka MLC Polls 2021: 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಇಂದು ಮತದಾನ
ಬಂಧಿತರನ್ನು ಜಯನಗರದ ಅಬ್ದುಲ್ ಖಾಲಿದ್ ಹಾಗೂ ರಾಮನಗರ ನಿವಾಸಿ ಗಂಗಾಧರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಿಳಿ ಬಣ್ಣದ ವಾಟರ್ ಕ್ಯಾನ್ ಒಳಗೆ ಜೀವಂತ ಮೊಸಳೆ ಮರಿ (Crocodile Hatchling) ತಂದು ಮಾರಾಟಕ್ಕೆ ಪ್ರಯತ್ನಿಸಿದ್ದರು. ಆದರೆ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ- ಪಿಎಚ್.ಡಿ ವಿದ್ಯಾರ್ಥಿಗಳಿಂದ ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿ ಅಹ್ವಾನ
ಚನ್ನಮ್ಮನ ಕೆರೆ (Chennammanakere) ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕೇಸ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ