ರಾಜ್ಯದಲ್ಲಿ ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಇಡೀ ರಾಜ್ಯವೇ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಎಲ್ಲೆಇ ನೋಡಿದರೂ ನೀರೇ ಕಣ್ಣಿಗೆ ಬೀಳುತ್ತದೆ. ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ಇನ್ನು ಕೂಡಾ ಇಳಿದಿಲ್ಲ.

Written by - Ranjitha R K | Last Updated : Sep 8, 2022, 03:17 PM IST
  • ರಾಜ್ಯದಲ್ಲಿಇನ್ನೂ ಎರಡು ದಿನ
  • ಎರಡು ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
  • ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
ರಾಜ್ಯದಲ್ಲಿ ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್ title=
Rain ALert (file photo)

ಬೆಂಗಳೂರು :  ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಿಗೆ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇಡೀ ರಾಜ್ಯವೇ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಎಲ್ಲಿ ನೋಡಿದರೂ ನೀರೇ ಕಣ್ಣಿಗೆ ಬೀಳುತ್ತದೆ. ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ಇನ್ನು ಕೂಡಾ ಇಳಿದಿಲ್ಲ. ಧರೆಯನ್ನು ತಂಪಾಗಿಸುವ ಮಳೆ ಈ ಬಾರಿ ಅಕ್ಷರಶಃ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. 

ಇದನ್ನೂ ಓದಿ : ಪತಿಯ ಕಾಲು ಕತ್ತರಿಸಿ ಪತ್ನಿ ಕೈಗೆ ಕೊಟ್ಟ ವೈದ್ಯರು..!

ಈ ನಡುವೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಐದು ದಿನಗಳವರೆಗೆ ನಿರಂತರ ಮಳೆಯಾಗಲಿದೆ. 
 
ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಿಗೂ ನಾಳೆ ಆರೆಂಜ್ ಅಲರ್ಟ್ ನೀಡಲಾಗಿದೆ. ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಾವಣೆಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಇದನ್ನೂ ಓದಿ : ರಾಜ್ಯದಲ್ಲಿ ಇನ್ನೂ 5 ದಿನ ಮಳೆರಾಯನ ಅರ್ಭಟ : 18 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News