ಚಾಮರಾಜನಗರ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಸಮೀಪ ಭಾನುವಾರ ನಡೆದಿದೆ.


COMMERCIAL BREAK
SCROLL TO CONTINUE READING

ಚೌಡಹಳ್ಳಿ ಗ್ರಾಮದ ಶಿವಯ್ಯ(56) ಹಾಗೂ ಹುಂಡಿಪುರ ಗ್ರಾಮದ ಅಜೀತ್(22) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚೌಡಹಳ್ಳಿ ಗ್ರಾಮದ ಚಂದು ಎಂಬಾತನಿಗೆ ತೀವ್ರ ಗಾಯಗಳಾದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲಾಗಿದೆ. ಚೌಡಹಳ್ಳಿ ಗ್ರಾಮದ ತಿರುವಿನಲ್ಲಿ ಎರಡು ಬೈಕ್ ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗುತ್ತಿದೆ. 


ಇದನ್ನೂ ಓದಿ:ಚಳಿಗಾಲದಲ್ಲಿ ನೋಡಲೇಬೇಕಾದ 5 ಸ್ಥಳಗಳು..! ಸಂಗಾತಿ ಜೊತೆ ತಪ್ಪದೇ ಹೋಗಿ ನೋಡಿ..


ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ, ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ