ಪ್ರಧಾನ ಮಂತ್ರಿಗಳ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಧಾರವಾಡದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಪರೀಕ್ಷಾ ಪೇ ಚರ್ಚಾ–2022 ಐದನೇ ಆವೃತ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಪ್ರೀಲ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ.

Written by - Zee Kannada News Desk | Last Updated : Mar 31, 2022, 06:32 PM IST
  • ಪ್ರಧಾನಮಂತ್ರಿಯವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ.
  ಪ್ರಧಾನ ಮಂತ್ರಿಗಳ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಧಾರವಾಡದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ  title=
file photo

ಧಾರವಾಡ: ಪರೀಕ್ಷಾ ಪೇ ಚರ್ಚಾ–2022 ಐದನೇ ಆವೃತ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಪ್ರೀಲ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Pariksha Pe Charcha: ಪ್ರಧಾನಿ ಮೋದಿಯೊಟ್ಟಿಗೆ ಚಾಮರಾಜನಗರ ವಿದ್ಯಾರ್ಥಿನಿ ಮಾತು

ಕೇಂದ್ರಿಯ ವಿದ್ಯಾಲಯ ಇಬ್ಬರು ವಿದ್ಯಾರ್ಥಿಗಳಾದ ಬಿ.ಮುರಳೀಧರ, ಪ್ರಣವ ಲಿಂಗದಳ್ಳಿ ಹಾಗೂ ಪಾಲಕರಾದ ಜ್ಯೋತಿ.ಬಿ.ಎನ್. ಅವರಿಗೆ ನೇರವಾಗಿ ಪ್ರಧಾನ ಮಂತ್ರಿಯವರೊಡನೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ದೊರೆತಿದೆ. ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6ನೇ ತರಗತಿಯಿಂದ 12ನೇ ತರಗತಿಯಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಶಾಲಾ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Pariksha Pe Charcha: ಬಿಡುವಿಲ್ಲದ ಕೆಲಸದ ಹೊರತಾಗಿಯೂ ನೀವು ಹೇಗೆ ಒತ್ತಡ ರಹಿತರಾಗಿರುತ್ತೀರಿ?

ಕಾರ್ಯಕ್ರಮವನ್ನು ದೂರದರ್ಶನ ಡಿ.ಡಿ. ನ್ಯಾಷನಲ್, ಡಿ.ಡಿ.ನ್ಯೂಸ್ ಮತ್ತು ಡಿ.ಡಿ.ಇಂಡಿಯಾ ಚಾನೆಲ್‍ಗಳ ಮೂಲಕ ಹಿಂದಿ ಮತ್ತು ಇತರೇ ಪ್ರಮುಖ ಭಾರತೀಯ ಭಾಷೆಗಳಲ್ಲಿ ನೇರ ಪ್ರಸಾರವಾಗಲಿದೆ. ಧಾರವಾಡ ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇಂಟರ್‍ನೆಟ್ ಸಂಪರ್ಕ ಹೊಂದಿರುವ ಕಂಪ್ಯೂಟರ್, ಲ್ಯಾಪ್‍ಟಾಪ್‍ಗಳ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News