ಬೆಳಗಾವಿ ವಶಪಡಿಸಿಕೊಳ್ಳುತ್ತೇವೆ ಎಂಬ ಉದ್ಧವ್ ಠಾಕ್ರೆ ಮಾತು ಚೀನಾದ ವಿಸ್ತರಣಾವಾದದಂತಿದೆ: HDK
ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ- ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು : 'ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ (Tweet) ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy), 'ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ ಎಂದಿದ್ದಾರೆ.
ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಸಿಎಂ ಹೇಳಿಕೆಯನ್ನು 'ಅಧಿಕಪ್ರಸಂಗತನ' ಎಂದ ಸಿದ್ದರಾಮಯ್ಯ
'ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ ಠಾಕ್ರೆ (Uddhav Thackeray) ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ' ರಾಜ್ಯ ಬಿಜೆಪಿ ನಾಯಕರ ಕಡೆಯೂ ಬೊಟ್ಟು ತೋರಿಸಿದ್ದಾರೆ.
'ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದೆನ್ನಬೇಕಾಗುತ್ತದೆ. ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ' ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ - ಉದ್ಧವ್ ಠಾಕ್ರೆ ಸರಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯಿರಿ: ಅಶ್ವಥ್ ನಾರಾಯಣ
'ಬೆಳಗಾವಿ (Belagavi) ಸಾಂಸ್ಕೃತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು. ಬೆಳಗಾವಿಯ ಬಗ್ಗೆ ಪದೇ ಪದೆ ಕಿತಾಪತಿ ಮಾಡುವ ಎಂಇಎಸ್ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದು, ಬೆಳಗಾವಿ ನಮ್ಮ ಅವಿಭಾಜ್ಯ ಅಂಗ ಎಂಬುದರ ದ್ಯೋತಕ ಎಂಬುದನ್ನು ಠಾಕ್ರೆ ಅರಿಯಲಿ' ಎಂದಿದ್ದಾರೆ.
'ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ' ಎಂದಿದ್ದಾರೆ.
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.