ಬೆಂಗಳೂರು: ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯು ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
ಉಡುಪಿ ಕಾಲೇಜು ವಿವಾದದ ಮಧ್ಯೆ ಇದೀಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣ ಮುನ್ನಲೆಗೆ ಬಂದಿದೆ. ಇದೇ ವಿಚಾರವಾಗಿ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ.
ತೀರ್ಥಹಳ್ಳಿಯಲ್ಲಿ ನೂರಾರು ಹಿಂದೂ ವಿದ್ಯಾರ್ಥಿನೀಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರ ಬಗ್ಗೆ ಬಿಜೆಪಿ ಹೋರಾಟ ರೂಪಿಸಲಿ.
ಯಾಕೆ ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ?
ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ?…
— Karnataka Congress (@INCKarnataka) July 28, 2023
ಇದನ್ನೂ ಓದಿ: Job Alert: ‘ಸಹಕಾರ ಬ್ಯಾಂಕ್’ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
‘ತೀರ್ಥಹಳ್ಳಿಯಲ್ಲಿ ನೂರಾರು ಹಿಂದೂ ವಿದ್ಯಾರ್ಥಿನೀಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರ ಬಗ್ಗೆ ಬಿಜೆಪಿ ಹೋರಾಟ ರೂಪಿಸಲಿ. ಯಾಕೆ ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ? ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ?’ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕಾಂಗ್ರೆಸ್ ಆಡಳಿತದ ಕರ್ನಾಟಕಕ್ಕೆ ಬಂದು ನಿರ್ಭೀತಿಯಿಂದ ಉಡುಪಿ ಕಾಲೇಜು ಪ್ರಕರಣವನ್ನು ಪರಿಶೀಲಿಸಿದ್ದಾರೆ,
ಆದರೆ
ಮಹಿಳೆಯರನ್ನು ಬೆತ್ತಲೆಗೊಳಿಸಿದ, ನೂರಾರು ಅತ್ಯಾಚಾರಗಳು ನಡೆದಿರುವ ಬಿಜೆಪಿ ಆಡಳಿತದ ಮಣಿಪುರಕ್ಕೆ ಹೋಗುವುದಕ್ಕೆ ಧೈರ್ಯ ಇಲ್ಲವೇ ಅಥವಾ ಇಚ್ಛೆ ಇಲ್ಲವೇ?ರಾಷ್ಟ್ರೀಯ ಮಹಿಳಾ ಆಯೋಗವು ಮಣಿಪುರದ…
— Karnataka Congress (@INCKarnataka) July 27, 2023
‘ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕಾಂಗ್ರೆಸ್ ಆಡಳಿತದ ಕರ್ನಾಟಕಕ್ಕೆ ಬಂದು ನಿರ್ಭೀತಿಯಿಂದ ಉಡುಪಿ ಕಾಲೇಜು ಪ್ರಕರಣವನ್ನು ಪರಿಶೀಲಿಸಿದ್ದಾರೆ. ಆದರೆ ಮಹಿಳೆಯರನ್ನು ಬೆತ್ತಲೆಗೊಳಿಸಿದ, ನೂರಾರು ಅತ್ಯಾಚಾರಗಳು ನಡೆದಿರುವ ಬಿಜೆಪಿ ಆಡಳಿತದ ಮಣಿಪುರಕ್ಕೆ ಹೋಗುವುದಕ್ಕೆ ಧೈರ್ಯ ಇಲ್ಲವೇ ಅಥವಾ ಇಚ್ಛೆ ಇಲ್ಲವೇ? ರಾಷ್ಟ್ರೀಯ ಮಹಿಳಾ ಆಯೋಗವು ಮಣಿಪುರದ ವಿಚಾರದಲ್ಲಿ ಕಣ್ಮುಚ್ಚಿ ಕುಳಿತಿರುವುದೇಕೆ?’ ಎಂದು ಕಾಂಗ್ರೆಸ್ ಕುಟುಕಿದೆ.
ಇದನ್ನೂ ಓದಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಚಿವರ ನೇಮಕ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.