Umesh Katti: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಸಿಎಂ ಆಗುವ ಕನಸು ಕಂಡಿದ್ದ ಉಮೇಶ್ ಕತ್ತಿ

ನೆರೆಯ ಆಂಧ್ರಪ್ರದೇಶ & ತೆಲಂಗಾಣದಂತೆ ನಮ್ಮ ರಾಜ್ಯದಲ್ಲೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಉಮೇಶ್ ಕತ್ತಿ ಪಣ ತೊಟ್ಟಿದ್ದರು. 

Written by - Zee Kannada News Desk | Last Updated : Sep 7, 2022, 12:43 AM IST
  • ಹೃದಯಾಘಾತದಿಂದ ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನ
  • ಆಂಧ್ರಪ್ರದೇಶ & ತೆಲಂಗಾಣದಂತೆ ನಮ್ಮ ರಾಜ್ಯದಲ್ಲಿಯೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದಿದ್ದರು
  • ಸಿಎಂ ಆಗುವ ಎಲ್ಲಾ ಅರ್ಹತೆ ನನಗಿದ್ದು, ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತೇನೆಂದು ಭರವಸೆ ಇಟ್ಟುಕೊಂಡಿದ್ದರು
Umesh Katti: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಸಿಎಂ ಆಗುವ ಕನಸು ಕಂಡಿದ್ದ ಉಮೇಶ್ ಕತ್ತಿ title=
ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ತೀವ್ರ ಹೃದಯಾಘಾತದಿಂದ ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಬೆಂಗಳೂರಿನ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ರಾತ್ರಿ 10.30ಕ್ಕೆ ಕತ್ತಿಯವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿತ್ತು. ಹಾರ್ಟ್ ಅಟ್ಯಾಕ್ ಆದ ಕಾರಣ ಕೂಡಲೇ ಅವರ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.

ತೀವ್ರ ನಿಗಾ ಘಟಕದಲ್ಲಿ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಚಿವ ಕತ್ತಿಯವರು ತಮ್ಮ 61ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಂ.ಎಸ್.ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರು ಮತ್ತು ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.  

ಸಿಎಂ ಆಗುತ್ತೇನೆಂದು ಕನಸು ಕಂಡಿದ್ದ ಉಮೇಶ್ ಕತ್ತಿ

ನೆರೆಯ ಆಂಧ್ರಪ್ರದೇಶ & ತೆಲಂಗಾಣದಂತೆ ನಮ್ಮ ರಾಜ್ಯದಲ್ಲೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಉಮೇಶ್ ಕತ್ತಿ ಪಣ ತೊಟ್ಟಿದ್ದರು. ಅನೇಕ ಬಾರಿ ಅವರು ಈ ಬಗ್ಗೆ ಧ್ವನಿ ಎತ್ತಿದ್ದರು. ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನಾನೇ ಮೊದಲ ಸಿಎಂ ಆಗುತ್ತೇನೆ ಎಂದು ಹೇಳಿದ್ದರು. ನನಗೆ ಇನ್ನೂ ಟೈಮ್ ಇದೆ, ನಾನು ಮುಂದೊಂದು ದಿನ ಈ ರಾಜ್ಯದ ಸಿಎಂ ಆಗಿಯೇ ಆಗುತ್ತೇನೆಂದು ಉಮೇಶ್​ ಕತ್ತಿ ಕನಸು ಕಂಡಿದ್ದರು. ಇರುವ 224 ಶಾಸಕರಲ್ಲಿ ನಾನೇ ಹಿರಿಯವನು. ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಗಳು ಇವೆ. ನನ್ನ ಹಣೆಬರಹದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ ಎಂಬ ಭರವಸೆ ಇಟ್ಟುಕೊಂಡಿದ್ದರು.

ನಾನು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ನನಗೆ ಅಖಂಡ ಕರ್ನಾಟಕದ ಸಿಎಂ ಆಗಬೇಕೆಂಬ ಬಯಕೆ ಇದೆ. ಪ್ರತ್ಯೇಕ ರಾಜ್ಯವಾದರೂ ಸಹ ನಾವು ಕನ್ನಡಿಗರೇ. ನಮ್ಮ ಜನರ ಅಭಿವೃದ್ಧಿ ದೃಷ್ಟಿಯಿಂದ ನಾನೇ ಹಿರಿಯನಾಗಿ ಈ ಬಗ್ಗೆ ಧ್ವನಿ ಎತ್ತಿದ್ದೇನೆ ಅಂತಾ ಕತ್ತಿ ಹೇಳಿದ್ದರು. ನಾನು ನಮ್ಮ ಉತ್ತರ ಕರ್ನಾಟಕದ ಜನರ ಹಿತದೃಷ್ಟಿಯಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಹೇಳುತ್ತಿದ್ದೇನೆ. ಪ್ರಧಾನಿ ಮೋದಿ, ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ನಾನು ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದರು.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News