Umesh Katti: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಸಿಎಂ ಆಗುವ ಕನಸು ಕಂಡಿದ್ದ ಉಮೇಶ್ ಕತ್ತಿ
ನೆರೆಯ ಆಂಧ್ರಪ್ರದೇಶ & ತೆಲಂಗಾಣದಂತೆ ನಮ್ಮ ರಾಜ್ಯದಲ್ಲೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಉಮೇಶ್ ಕತ್ತಿ ಪಣ ತೊಟ್ಟಿದ್ದರು.
ಬೆಂಗಳೂರು: ತೀವ್ರ ಹೃದಯಾಘಾತದಿಂದ ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಬೆಂಗಳೂರಿನ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ರಾತ್ರಿ 10.30ಕ್ಕೆ ಕತ್ತಿಯವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿತ್ತು. ಹಾರ್ಟ್ ಅಟ್ಯಾಕ್ ಆದ ಕಾರಣ ಕೂಡಲೇ ಅವರ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ತೀವ್ರ ನಿಗಾ ಘಟಕದಲ್ಲಿ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಚಿವ ಕತ್ತಿಯವರು ತಮ್ಮ 61ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಂ.ಎಸ್.ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರು ಮತ್ತು ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
https://bit.ly/3AClgDdApple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.