ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಯ ಸ್ಥಳ ಪರಿಶೀಲನೆ

Building Eviction Operation: ಬಿಎಂಪಿ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಂತ-ಹಂತವಾಗಿ ಅನಧಿಕೃತ ಕಟ್ಟಗಳ ತೆರವುಕಾರ್ಯಾಚರಣೆ ನಡೆಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು. 

Written by - Zee Kannada News Desk | Last Updated : Jul 20, 2023, 05:37 PM IST
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಯ ಸ್ಥಳ ಪರಿಶೀಲನೆ title=

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಂತ-ಹಂತವಾಗಿ ಅನಧಿಕೃತ ಕಟ್ಟಗಳ ತೆರವುಕಾರ್ಯಾಚರಣೆ ನಡೆಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು. 

ದಕ್ಷಿಣ ವಲಯ ಬಸವನಗುಡಿ ಈಜುಕೊಳದ ಎದುರು ಇಂದು ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತವಾಗಿ ಕಟ್ಟಲಾಗುತ್ತಿರುವ 80 ಕಟ್ಟಡಗಳಿಗೆ ನಗರ ಯೋಜನೆ- ದಕ್ಷಿಣ ರವರಿಂದ ಬಿಬಿಎಂಪಿ ಕಾಯ್ದೆ 356(2) ನಲ್ಲಿ ಅಂತಿಮ ಆದೇಶ ಜಾರಿಗೊಳಿಸಿದ್ದು, ಕಟ್ಟಡ ತೆರವುಗೊಳಿಸುವ ಕಾರ್ಯಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. 

ಇದನ್ನೂ ಓದಿ: ಇನ್ನ್ಮುಂದೆ ಲೈಂಗಿಕ ಕ್ರಿಯೆಗೆ ಪುರುಷ-ಮಹಿಳೆಯರೇ ಬೇಡ, ಅದಕ್ಕೂ ಬಂತು ರೋಬೋಟ್!

ನಗರ ಯೋಜನೆ ಅಧಿಕಾರಿಗಳು ಹಾಗೂ ವಾರ್ಡ್ ಮಟ್ಟದ ಅಭಿಯಂತರರೊಡನೆ ಬುಧವಾರ ದಿನಾಂಕ: 19-07-2023 ರಂದು ಬಸವನಗುಡಿಯ ಗಿರಿನಗರದಲ್ಲಿ ಒಂದು ಅಂತಸ್ತು ಹೆಚ್ಚುವರಿಯಾಗಿ ನಿರ್ಮಾಣ ಮಾಡಲಾಗುತ್ತಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ. ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ನಂ. 19 ಪಂಪ ಮಹಾಕವಿ ರಸ್ತೆ, ಬಸವನಗುಡಿ ಈಜುಕೊಳದ ಎದುರು ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿಯಾಗಿ ನಿರ್ಮಿಸಲಾಗುತ್ತಿರುವ ಎರಡು ಅಂತಸ್ತುಗಳನ್ನು ತೆರವು ಮಾಡುವ ಕಾರ್ಯವದ ಸ್ಥಳಕ್ಕೆ ಭೇಟಿ ತ್ವರಿತಗತಿಯಲ್ಲಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಸಾಕಷ್ಟು ಕಡೆ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ ಎಂಬ ದೂರುಗಳನ್ನು ಆಧರಿಸಿ ನಗರ ಯೋಜನಾ ಅಧಿಕಾರಿಗಳು, ಹೆಚ್ಚುವರಿಯಾಗಿ ಕಟ್ಟಿರುವಂತಹ ಅಂತಸ್ತುಗಳನ್ನು ದಾಖಲೆ ಸಹಿತ ಸಾಬೀತುಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಕ್ಷೆ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಗಳ ತೆರವಿಗೆ ಆದೇಶ ಹೊರಡಿಸಲಾಗಿದೆ. 

ಇದನ್ನೂ ಓದಿ: Manipur Violence: ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ ಅತ್ಯಾಚಾರ; ವಿಡಿಯೋ ವೈರಲ್‌..!

ಮುಂದಿನ ದಿನಗಳಲ್ಲಿ ಉಳಿದ ಕಟ್ಟಡಗಳು ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಹೆಚ್ಚುವರಿ ಅಂತಸ್ತುಗಳನ್ನು ತೆರವುಗೊಳಿಸಲು ಯೋಜನೆಯನ್ನು ತಯಾರಿಸಲಾಗಿದ್ದು, ತೆರವು ಮಾಡುವ ಕಾರ್ಯವನ್ನು ಮುಂದುವರಿಸಲಾಗುವುದು ಮತ್ತು ನ್ಯಾಯಾಲಯದಲ್ಲಿ ಇದ್ದ ತಡೆಯಾಜ್ಞೆಗಳು ತೆರವಾಗಿದ್ದು, ಅಕ್ರಮವಾಗಿ ಹೆಚ್ಚುವರಿ ನಿರ್ಮಿಸಲಾಗುತ್ತಿರುವ ಅಂತಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಮಾನ್ಯ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯ್ಪುರ ರವರು ತಿಳಿಸಿದ್ದಾರೆ.

ಉಲ್ಲಂಘನೆಯಾಗಿರುವ ಕಟ್ಟಡಗಳ ವಿವರ:

ದಕ್ಷಿಣ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕಪೇಟೆಯಲ್ಲಿ 31 ಕಟ್ಟಗಳು, ಜಯನಗರದಲ್ಲಿ 18 ಕಟ್ಟಗಳು, ಬಸವನಗುಡಿಯಲ್ಲಿ 16 ಕಟ್ಟಗಳು, ಪದ್ಮನಾಭನಗರದಲ್ಲಿ 9 ಕಟ್ಟಡಗಳು, ಬಿಟಿಎಂ ಬಡಾವಣೆಯಲ್ಲಿ 5 ಕಟ್ಟಡಗಳು ಹಾಗೂ ವಿಜಯನಗರದಲ್ಲಿ 1 ಕಟ್ಟಡ ಸೇರಿದಂತೆ ಒಟ್ಟು 80 ಕಟ್ಟಡಗಳಲ್ಲಿ ಉಲ್ಲಂಘನೆ ಮಾಡಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು, ಉಲ್ಲಂಘಿಸಿರುವ ಕಟ್ಟಡಗಳನ್ನು ಹಂತ-ಹಂತವಾಗಿ ಎಲ್ಲಾ ತೆರವುಗೊಳಿಸಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News