ಬೆಂಗಳೂರು: ದುಬಾರೆ ಮೀಸಲು ಅರಣ್ಯದಲ್ಲಿ 'ಜಂಗಲ್ ಲಾಡ್ಜ್ & ರೆಸಾರ್ಟ್' (Jungle Lodge & Resort) ನಿರ್ಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ (Highcourt) ವಜಾಗೊಳಿಸಿದೆ. ಅಲ್ಲದೆ ನ್ಯಾಯಾಲಯದ ಸಮಯವನ್ನು ಅರ್ಜಿದಾರರು ಹಾಳು ಮಾಡಿದ್ದಾರೆಂದು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.


COMMERCIAL BREAK
SCROLL TO CONTINUE READING

ಕೊಡಗು ಜಿಲ್ಲೆಯ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಕ್ರಮವಾಗಿ 'ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್' (Jungle Lodge & Resort) ನಡೆಸುತ್ತಿದೆ , ಎಂದು ಪ್ರಶ್ನಿಸಿ ಕೊಡಗಿನ ಪಿ.ಎಸ್.ಮೋಹನ್ ಸೇರಿದಂತೆ ಇತರೆ ಐವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ವಿಚಾರಣೆ ನಡೆಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.


ಇದನ್ನೂ ಓದಿ- ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ವಿಚಾರಸಂಕಿರಣ : ಪ್ರಬಂಧಗಳಿಗೆ ಆಹ್ವಾನ


ಅರ್ಜಿದಾರರು ಹೇಳಿರುವಂತೆ ಕೊಡಗು ಜಿಲ್ಲೆಯ ದುಬಾರೆ ಅರಣ್ಯ (Dubare Forest) ಪ್ರದೇಶದಲ್ಲಿ ಖಾಸಗಿ ಸಂಸ್ಥೆಗಳು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಸ್ ನಿರ್ಮಿಸಲು ಕೇಂದ್ರ ಸರಕಾರದಿಂದ ಪೂರ್ವಾನುಮತಿ ಪಡೆಯಬೇಕಿಲ್ಲ. ಈ ಜಾಗ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿಯಂತ್ರಣಕ್ಕೆ ಒಳಪಟ್ಟಿದ್ದು, ಸಂಪೂರ್ಣ ರಾಜ್ಯ ಸರ್ಕಾರದ ಆಡಳಿತಕ್ಕೆ ಸೇರುತ್ತದೆ. ಹೀಗಿದ್ದರೂ ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ತರಲು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು ಮಾಡಿದ್ದಾರೆಂದು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಆದೇಶ ಹೊರಡಿಸಿದೆ‌. ಅಲ್ಲದೆ ದಂಡದ ಮೊತ್ತವನ್ನು 1 ತಿಂಗಳ ಒಳಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸುವಂತೆ ಸೂಚಿಸಲಾಗಿದೆ.


ಇದನ್ನೂ ಓದಿ- ವಿದ್ಯಾಸಿರಿ ಯೋಜನೆಯಡಿ ಅರ್ಜಿ ಸಲ್ಲಿಸಲು ಜ.10 ರವರೆಗೆ ಅವಧಿ ವಿಸ್ತರಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.