ಬೆಂಗಳೂರು, ಮೇ 21: ನಗರದ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬ ವರ್ಗದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಪುನಃಸ್ಥಾಪನೆಗೆ ಮುಂದಾದ ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರ
ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು ತನಿಖೆಗೆ ಆದೇಶಿದ್ದಾರೆ.ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಮುಖ್ಯಮಂತ್ರಿ @siddaramaiah ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ… pic.twitter.com/RH9QzjQpij— CM of Karnataka (@CMofKarnataka) May 21, 2023
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮಳೆ ನೀರಿಗೆ ಮುಳುಗಿದ ಕಾರು: ಕಾರಿನಲ್ಲಿದ್ದ ಪುಟ್ಟ ಕಂದಮ್ಮನಿಗಾಗಿ ಶೋಧ
ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು.ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.