ನವದೆಹಲಿ: ಕಳೆದ ಕೇಂದ್ರ ಬಜೆಟ್ ನಲ್ಲಿ ಅನುಮೋದನೆ ನೀಡಲಾಗಿದ್ದ ಮಹತ್ವದ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ (Benglore Sub Urban Railway Project) ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.


COMMERCIAL BREAK
SCROLL TO CONTINUE READING

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬೆಂಗಳೂರು ಸಬ್ ಆರ್ಬನ್ ರೈಲು ಯೋಜನೆಗೆಒಪ್ಪಿಗೆ ಸೂಚಿಸಿದೆ. ಇದು 20 ಸಾವಿರ ಕೋಟಿ ರೂಪಾಯಿಗಳ ಹೂಡಿಕೆಯ ಯೋಜನೆಯಾಗಿದೆ.


ಇದು ಬೆಂಗಳೂರು ನಗರ  ಮತ್ತು ಗ್ರಾಮಾಂತರ ವ್ಯಾಪ್ತಿಯ148 ಕಿಲೋ ಮೀಟರ್ ಮಾರ್ಗದಲ್ಲಿ ಸಂಚರಿಸುವ ಸಬ್ ಆರ್ಬನ್ ರೈಲು ಯೋಜನೆಯಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆಯಾದರೂ ಸದ್ಯ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣದಿಂದ ಕೇಂದ್ರ  ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ.


ಬೆಂಗಳೂರು ಸಬರ್ಬನ್ ರೈಲ್ವೆ ಯೋಜನೆಗೆ ಒಪ್ಪಿಗೆ


ಕಳೆದ ಬಜೆಟ್ ನಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯನ್ನು ಘೋಷಿಸಬೇಕೆಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ (PC Mohan) ಅವರು ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಪಿ.ಸಿ. ಮೋಹನ್ ಒತ್ತಡಕ್ಕೆ ಮಣಿದಿದ್ದ ಕೇಂದ್ರ ಸರ್ಕಾರ ಕಳೆದ ಬಜೆಟ್ ನಲ್ಲಿ ಬೆಂಗಳೂರು ಸಬ್ ಆರ್ಬನ್ ರೈಲು ಯೋಜನೆಯನ್ನು ಘೋಷಿಸಿತ್ತು. ಈಗ ಸಬ್ ಆರ್ಬನ್ ರೈಲು ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆಯೂ ಒಪ್ಪಿಗೆ ಸಿಕ್ಕಿದೆ.