ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ: ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯ
ನವದೆಹಲಿ: ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.
ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಅನಂತ್ - ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!
ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.
ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.
ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಶಾ ಅವರನ್ನು ಕೋರಲಾಯಿತು.
ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.
ಇದನ್ನೂ ಓದಿ: ಕೋಚ್ ರಾಹುಲ್ ದ್ರಾವಿಡ್’ಗೆ ನಾಳೆಯೇ ಕೊನೆಯ ಪಂದ್ಯ: ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು?
ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ