ನಿಮ್ಮ ಶಾಸಕರು ಸತ್ತೋದ್ರ- ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ

ಕಾಂಗ್ರೆಸ್ ಶಾಸಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಅನಂತ್ ಕುಮಾರ್ ಹೆಗ್ಡೆ.  

Last Updated : Jul 2, 2018, 10:53 AM IST
ನಿಮ್ಮ ಶಾಸಕರು ಸತ್ತೋದ್ರ- ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ title=
File Image

ಶಿರಸಿ: ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಕಾಂಗ್ರೆಸ್ ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಶಿರಸಿ ತಾಲೂಕಿನ ಬನವಾಸಿಯಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗ್ಡೆ ಅವರ ಬಳಿ ಮಹಿಳೆಯೊಬ್ಬರು ಯಲ್ಲಾಪುರದ ಹಳ್ಳಿಯೊಂದರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಯನ್ನು ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಸಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ನಿಮ್ಮ ಶಾಸಕರೇನು ಸತ್ತೋದ್ರ ಎಂದು ಖಾರವಾಗಿ ಪ್ರಶ್ನಿಸುವ ಮೂಲಕ ಸ್ಥಳೀಯ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ಮೇಲಿನ ಕೋಪವನ್ನು ಹೊರಹಾಕಿದ್ದಾರೆ.

ಇದೇ ವೇಳೆ ಮನವಿ ಮಾಡಿದ ಮಹಿಳೆಗೆ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ, ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ತೆರಳಿದ್ದಾರೆ.

Trending News