Union Minister Gajendra Singh Shekhawat: ಕನ್ನಡದಲ್ಲೇ ಟ್ವಿಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.


ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?


ಇದನ್ನೂ ಓದಿ- ಬಿಸಿಯೂಟ ನೌಕರರ ಪ್ರತಿಭಟನೆ: ಇಂದು ರಾಜಧಾನಿ ಜನರಿಗೆ ತಟ್ಟಲಿದೆ ಟ್ರಾಫಿಕ್ ಕಿರಿ ಕಿರಿ


-  2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು  ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ. 


- ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ.


ಇದನ್ನೂ ಓದಿ- ನಾವಿಕನಿಲ್ಲದೆ ಮುಳುಗುತ್ತಿರುವ ಬಿಜೆಪಿ ಹಡಗಿನಿಂದ ಎಲ್ಲರೂ ಹೊರ ಜಿಗಿಯುವವರೇ?: ಕಾಂಗ್ರೆಸ್


ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು  ತೋರಬಹುದು ಎಂದು ಕೇಂದ್ರ ಸಚಿವರು ಮುಖ್ಯಮಂತ್ರಿಗಳ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.