ಮೂಗಿನಲ್ಲಿ ರಕ್ತಸ್ರಾವ, ಆಸ್ಪತ್ರೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು. ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಡಲಾಯಿತು..
ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.
ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು. ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.
ಇದನ್ನೂ ಓದಿ:ಆ. 3ರಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಪಾದಯಾತ್ರೆ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಯಾರಿಗೂ ಆತಂಕ ಬೇಡ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು.
ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು ಅವರು.
ಇದನ್ನೂ ಓದಿ:ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ತೀವ್ರ ಹೋರಾಟ : ಜೋಶಿ
ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ. 92 ವರ್ಷಗಳ ದೇವೇಗೌಡರು ನಾಳೆಯ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ ಇರಬೇಕು ಎಂದು ಕೇಂದ್ರ ಸಚಿವರು ಹೇಳಿದರು.
ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದ ಅವರು; ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಇದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.