ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?- ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ

ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು; ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ? ಎಂದು ಕಾಲೆಳೆದಿದ್ದಾರೆ.

Written by - Bhavishya Shetty | Last Updated : Apr 16, 2025, 06:05 PM IST
    • ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
    • ಗಣತಿಯ ಲಾಭ ನಿಮಗೋ? ಅಥವಾ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?
    • ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?- ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ
Caste Censu

ಬೆಂಗಳೂರು: ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು; ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ? ಎಂದು ಕಾಲೆಳೆದಿದ್ದಾರೆ.

Add Zee News as a Preferred Source

ಅಲ್ಲದೆ, ನಿಮ್ಮ ಗಣತಿಯ ಒಳಮರ್ಮ ರಾಹುಲ್ ಗಾಂಧಿ ಅವರಿಗೆ ಅರ್ಥವಾದಂತೆ ಇಲ್ಲ, ಪಾಪ ಎಂದು ಅವರು ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ:  ದುಬಾರಿ ಹೇರ್‌ ಕಲರ್‌ ಬದಲು.. ಹರಳೆಣ್ಣೆಗೆ ಈ ಎಲೆ ಬೆರೆಸಿ ಹಚ್ಚಿದ್ರೆ ಹತ್ತೇ ನಿಮಿಷದಲ್ಲಿ ಕಪ್ಪಾಗುತ್ತವೆ ಬಿಳಿಕೂದಲು! ಮತ್ತೇ ಬೆಳ್ಳಗಾಗಲ್ಲ..

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು ರಾಜ್ಯ ಕಾಂಗ್ರೆಸ್ ಸರಕಾರದ ಹಿಡೆನ್‌ ಅಜೆಂಡಾ! ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷ ಗಣತಿಯನ್ನೇ ಗುರಾಣಿ ಮಾಡಿಕೊಂಡಿದೆ! ಎಂದು ಅವರು ಗುಡುಗಿದ್ದಾರೆ.

"ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ?"  ಎಂದು ಕನಕದಾಸರ ಪದವನ್ನು ಉಲ್ಲೇಖಿಸಿರುವ ಕೇಂದ್ರ ಸಚಿವರು; ಹೀಗೆಂದರೇನು ಸನ್ಮಾನ್ಯ ಮುಖ್ಯಮಂತ್ರಿಗಳೇ?  ಕನಕದಾಸರ ಆಶಯ ಅರ್ಥಪೂರ್ಣ. ನಿಮ್ಮ ಪ್ರಾಯೋಜಿತ ಗಣತಿ ವರದಿಯ ದುರಾಶಯ ಪ್ರಶ್ನಾರ್ಹ. ಹೇಳುವುದು ಒಂದು, ಮಾಡಿದ್ದು ಇನ್ನೊಂದು ಎಂದು ಕುಟುಕಿದ್ದಾರೆ.

"ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ.."

ಎಂಬ ಬಸವಣ್ಣ ಅವರ ವಚನದ ಉಲ್ಲೇಖ ಮಾಡಿ, ಎಲ್ಲರನ್ನೂ ಒಳಗೊಳ್ಳುವ  ಬಸವಣ್ಣನವರ ವಚನವನ್ನು ಬರೆದುಕೊಂದ್ದೀರಿ. ಇವರು ನಮ್ಮವರಲ್ಲ, ಇವ ನಮ್ಮನಲ್ಲ..ʼ ಎಂದು ಕೃತಿಯಲ್ಲಿಯೇ ತೋರುತ್ತೀರಿ! ಬೂಟಾಟಿಕೆಗೂ ಇತಿಮಿತಿ ಬೇಡವೇ ಸಿದ್ದರಾಮಣ್ಣ..? ಎಂದು ಕುಮಾರಸ್ವಾಮಿ ಅವರು ಪ್ರಹಾರ ನಡೆಸಿದ್ದಾರೆ.

ಸಾಮಾಜಿಕ ನ್ಯಾಯ ಎಂದರೆ ನಿಮಗೆ ಬೇಡವಾದ ಸಮಾಜಗಳ ತುಚ್ಛೀಕರಣ! ಸಾಮಾಜಿಕ ನ್ಯಾಯವೆಂದರೆ ಒಂದು  ನಿರ್ದಿಷ್ಟ ಸಮಾಜದ ತುಷ್ಠೀಕರಣ!! ಜಾತಿ ಸಮೀಕರಣವಲ್ಲ, ರಾಜಕೀಯ ಲಾಭಕ್ಕೆ ಜಾತಿಗಳ ಏಕೀಕರಣಕ್ಕೆ ಕೈ ಹಾಕಿದ್ದೀರಿ. ಗಣತಿಯ ಲಾಭ ನಿಮಗೋ? ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?  ನಿಮ್ಮ ಒಳಮರ್ಮ ರಾಹುಲ್ ಗಾಂಧಿ ಅರ್ಥವಾದಂತೆ ಇಲ್ಲ, ಪಾಪ.. ಎಂದು ಅವರು ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ:  ನಟಿ ವೈಷ್ಣವಿ ಗೌಡ ಎಂಗೇಜ್ಮೆಂಟ್‌.. ಸೀತಾರಾಮ ಸುಂದರಿ ಕೈ ಹಿಡಿಯುತ್ತಿರುವ ಹುಡುಗ‌ ಯಾರು ಗೊತ್ತಾಯ್ತಾ?

ಹಿಂದೆ ವೀರೇಂದ್ರ ಪಾಟೀಲ್‌ ಅವರಿಗೆ ಎಸಗಿದ ಅನ್ಯಾಯಕ್ಕೆ ನಿಮ್ಮ ಪಕ್ಷ ಬೆಲೆ ತೆತ್ತಿದೆ, ನೆನಪಿಲ್ಲವೇ? ನೀವೂ, ನಿಮ್ಮ ಪಕ್ಷ ಇತಿಹಾಸದಿಂದ ಪಾಠ ಕಲಿಯುವುದಿಲ್ಲ. ತಪ್ಪು ತಿದ್ದಿ ನಡೆಯುವ ಗುಣಲಕ್ಷಣ ನಿಮಗೂ ಇಲ್ಲ, ನಿಮ್ಮ ಪಕ್ಷಕ್ಕೂ ಇಲ್ಲ. ನೆಮ್ಮದಿಯಾಗಿದ್ದ ಕರ್ನಾಟಕವನ್ನು ಕೆಣಕಿದ್ದೀರಿ. ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ. ಜನರಿಗೆ ನಿಮ್ಮ ಅಸಲಿಯೆತ್ತು ಗೊತ್ತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News