ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾಳೆ ಭೇಟಿ

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಗಲಭೆ ಪೀಡಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಲಿದ್ದಾರೆ.  

Written by - Bhavishya Shetty | Last Updated : Sep 12, 2024, 08:54 PM IST
    • ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಗಲಾಟೆ
    • ಪೊಲೀಸರು ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
    • ಗಲಭೆ ಪೀಡಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ
ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾಳೆ ಭೇಟಿ
File Photo

ನವದೆಹಲಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಗಲಭೆ ಪೀಡಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಲಿದ್ದಾರೆ.

Add Zee News as a Preferred Source

ಇದನ್ನೂ ಓದಿ: ತಲ್ವಾರ್ ಝಳಪಿಸುವುದು ಸಣ್ಣ ವಿಚಾರವೇ? ಒಂದು ಸಮುದಾಯದ ಓಲೈಕೆ ನಡೆಯುತ್ತಿದೆ : ಹೆಚ್‌ಡಿಕೆ ಕಿಡಿ

"ಶುಕ್ರವಾರ ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಏನು ನಡೆಯಿತು ಎಂಬುದರ ಬಗ್ಗೆ ಜನರಿಂದ ಖುದ್ದು ಮಾಹಿತಿ ಪಡೆಯುತ್ತೇನೆ. ಸರ್ಕಾರ ಕೂಡಾ ಸತ್ಯವನ್ನು ಹೇಳಬೇಕು. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿರುವುದನ್ನು ಮಾಧ್ಯಮಗಳು ವರದಿ ಮಾಡಿದ್ದು, ಇದೊಂದು ಪೂರ್ವ ನಿಯೋಜಿತ ಯೋಜನೆ ಎಂಬುದನ್ನು ತೋರಿಸುತ್ತಿದೆ. ಎಲ್ಲಾ ಮಾಹಿತಿ ಪಡೆದು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತೇನೆ" ಎಂದರು.

ಇದನ್ನೂ ಓದಿ: ಒಂದು ತುಂಡು ಟೋಮೆಟೋವನ್ನು ಹೀಗೆ ಬಳಸಿದರೆ ಬೋಳುತಲೆಯಲ್ಲೂ ದಷ್ಟಪುಷ್ಟ ಗಾಢಕಪ್ಪು ಕೂದಲು ಬೆಳೆಯುತ್ತೆ! ಟ್ರೈ ಮಾಡಿ ನೋಡಿ

ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಇನ್ನು ಈ ಗಲಭೆಗೆ ಸಂಬಂಧಿಸಿದಂತೆ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಆಧರಿಸಿ ಯಾರೆಲ್ಲ ಕಲ್ಲು ತೂರಿದ್ದಾರೆ, ಬೆಂಕಿ ಹಾಕಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೂ ಕಲ್ಲು ಏಟು ಬಿದ್ದಿದ್ದು, ಓರ್ವ ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ರೀತಿ ಕಾಣುತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News