ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲಾ ಆಗುತ್ತಿದೆ ಎಂದು ಹರಿಹಾಯ್ದರು.


COMMERCIAL BREAK
SCROLL TO CONTINUE READING

ರಾಹುಲ್ ಮುಸ್ಲಿಂ ಲೀಗ್ ಧ್ವಜ ಹಿಡಿದಿದ್ದೇ ಕಾರಣ


ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್ ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಜೋಶಿ ಆರೋಪಿಸಿದರು.


ಇದನ್ನೂ ಓದಿ: ನಮ್ಮ ಗ್ಯಾರಂಟಿಗಳು ಜನರ ಬದುಕನ್ನು ಉತ್ತಮಪಡಿಸುತ್ತಿವೆ-ಸಚಿವ ಎಂ.ಬಿ.ಪಾಟೀಲ್


ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ


ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ... ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಜೋಶಿ ಹೇಳಿದರು.


ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗ್ರತಾರಾಗಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.


ಇದನ್ನೂ ಓದಿ: Lok Sabha Election 2024: ಉಮೇಶ್ ಜಾಧವ್ ವಿರುದ್ಧ ತಿರುಗಿ ಬಿದ್ದ ಕ್ಷೇತ್ರದ ಜನತೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.