ನಾಳೆ ಕೊಡಗಿಗೆ ಕೇಂದ್ರ ಸಚಿವ ಸದಾನಂದ ಗೌಡ ಭೇಟಿ
ಶನಿವಾರ ಬೆಳಿಗ್ಗೆ ಕೇಂದ್ರ ಸರ್ಕಾರದ ಪರವಾಗಿ ಮಳೆ ಹಾನಿಗೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಆಗಸ್ಟ್ 18ರಂದು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯ ವಿವರ ಪಡೆಯಲಿದ್ದಾರೆ.
ಶನಿವಾರ ಬೆಳಿಗ್ಗೆ ಕೇಂದ್ರ ಸರ್ಕಾರದ ಪರವಾಗಿ ಮಳೆ ಹಾನಿಗೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಸಂತ್ರಸ್ಥರು ಮತ್ತು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಶನಿವಾರ ಅಲ್ಲೇ ಉಳಿದು, ಭಾನುವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.