Channapatna bypoll: ಚನ್ನಪಟ್ಟಣದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯುದ್ಧ ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಗೆಲ್ಲುವ ಮೂಲಕ ಅಧರ್ಮಕ್ಕೆ ಹೀನಾಯ ಸೋಲಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯ ಕಣದಲ್ಲಿ NDA ಅಭ್ಯರ್ಥಿ ನಿಖಿಲ್ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅವರು ಗೊಳ್ಳರದೊಡ್ಡಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.


COMMERCIAL BREAK
SCROLL TO CONTINUE READING

ಕುತಂತ್ರ ಅಧರ್ಮ ಹಾಗೂ ಧರ್ಮದ ನಡುವಿನ ಚುನಾವಣೆ ಇದಾಗಿದೆ. ಈ ಬಾರಿ ನಿಖಿಲ್ ಅಭಿವನ್ಯುವಲ್ಲ, ಅರ್ಜುನನಾಗಿ ಯುದ್ಧವನ್ನು ಎದುರಿಸುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಪಡೆ ಅವರಿಗೆ ಸಾಥ್ ನೀಡುತ್ತಿದೆ. ಎರಡೂ ಪಕ್ಷಗಳ ನಾಯಕರು ಕೃಷ್ಣನ ಪಾತ್ರ ವಹಿಸಿ ಅಧರ್ಮವನ್ನು ಹಿಮ್ಮೆಟ್ಟಿಸಲಿದ್ದಾರೆ. ಸಚಿವರ ದಂಡು ಚನ್ನಪಟ್ಟಣದಲ್ಲಿದೆ. ಡಿಸಿಎಂ ಇವತ್ತು ಬಂದಿದ್ದಾರೆ, ಎಲ್ಲಾ ಕಂಡೆ ನಮ್ಮನ್ನು ಬೈದುಕೊಂಡು ಹೋಗುತ್ತಿದ್ದಾರೆ ಅಂತಾ ಕುಮಾರಸ್ವಾಮಿ ಕಿಡಿಕಾರಿದರು.


ಇದನ್ನೂ ಓದಿ: ಆಸ್ತಿ ಕಬಳಿಸುವುದು ವಕ್ಫ್‌ ಬೋರ್ಡ್‌ನ ಒಂದು ದಂಧೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ


ಚದುರಂಗ ಆಡಿದವರೆಲ್ಲ ಏನಾದರು?


ಚದುರಂಗ ಆಡಿದವರೆಲ್ಲಾ ಮುಳುಗಿದ್ದಾರೆಂಬ ಡಿಕೆಶಿ ಶಿವಕುಮಾರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಎಚ್‌ಡಿಕೆ, ʼಚದುರಂಗ ಆಟ ಆಡಿ ಮುಳುಗಿ ಎದ್ದವರ ಇತಿಹಾಸ ಇದೆ. ಎಲ್ಲದಕ್ಕೂ ಅಂತಿಮ ಎನ್ನುವುದು ಇದೆ. ಅವರಂತೆ ಚದುರಂಗ ಆಡಿ ಮಹಾ ಸಾಮ್ರಾಜ್ಯಗಳೇ ಆಗಿಹೋಗಿವೆ. ಮೌರ್ಯ ಸಾಮ್ರಾಜ್ಯ ಸೇರಿ ಅನೇಕ ಸಾಮ್ರಾಜ್ಯಗಳ ಕಾಲ ಮುಗಿದುಹೋಗಿದೆ. ಯಾರೂ ಇಲ್ಲಿ ಶಾಶ್ವತ ಅಲ್ಲ. ಇವರು ಕೂಡ ಶಾಶ್ವತ ಅಲ್ಲವೆಂದು ಕುಟುಕಿದರು. 


1994ರಲ್ಲಿ ಸೋತು ಕುತಂತ್ರದಿಂದ ಫಲಿತಾಂಶ ಬದಲಾಯಿಸಿದರು. ಆಮೇಲೆ ಅವರು ಏನೆಲ್ಲಾ ಆಟ ಆಡಿದರು ಎನ್ನುವುದು ಗೊತ್ತಿದೆ. ಇಂತಹ ವ್ಯಕ್ತಿಗಳಿಂದ ಚದುರಂಗದ ಆಟ ಕಲಿಯಬೇಕಿಲ್ಲ. ಚನ್ನಪಟ್ಟಣ ಚುನಾವಣೆ ಮುಂದಿನ ರಾಜ್ಯ ರಾಜಕೀಯಕ್ಕೆ ದಿಕ್ಸೂಚಿ ಆಗಲಿದೆ. ರಾಜ್ಯದಲ್ಲಿ ಮುಂದೆ ಸಂಭವಿಸಲಿರುವ ಎಲ್ಲಾ ರಾಜಕೀಯ ಘಟನೆಗಳಿಗೆ ಚನ್ನಪಟ್ಟಣ ಫಲಿತಾಂಶವೇ ನಾಂದಿ ಆಗಲಿದೆ. ಮೂರು ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ಈ ಕಾಂಗ್ರೆಸ್ ಸರ್ಕಾರದ ಹಣೆಬರಹವನ್ನ ನಿರ್ಧರಿಸಲಿದೆ ಎಂದು ಹೇಳಿದರು.  


ಕುತಂತ್ರದಿಂದ ನಿಖಿಲ್‌ ಅವರನ್ನು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ, ರಾಮನಗರದಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಸೋಲಿಸಿದರು. ಇವತ್ತು ಡಿಸಿಎಂ ಹುದ್ದೆಯಲ್ಲಿರುವ ವ್ಯಕ್ತಿ ನಿಖಿಲ್ ಅವರನ್ನು ಕಂದ, ಶಿಶು ಎಂದು ಕರೆಯುತ್ತಿದ್ದಾರೆ. ಆ ಶಿಶುವನ್ನು ಕುತಂತ್ರದಿಂದ ಸೋಲಿಸಿದ್ದು ಯಾರು? ಅಭಿಮನ್ಯು ಕೂಡ ಶಿಶುವೇ ಅಲ್ಲವೇ? ಅರ್ಜುನನನ್ನು ಕುತಂತ್ರದಿಂದ ಬೇರೆಡೆಗೆ ಸಾಗಹಾಕಿ ಅಭಿಮನ್ಯುವನ್ನು ಸೋಲಿಸಿ ಹೇಯವಾಗಿ ಕೊಂದರು. ಅದೇ ರೀತಿ ಮಂಡ್ಯ,  ರಾಮನಗರದಲ್ಲಿ ನಿಖಿಲ್ ಅವರನ್ನು ಸೋಲಿಸಿದರು. ಈ ಬಾರಿ ನಿಖಿಲ್ ಅಭಿಮನ್ಯುವಲ್ಲ, ಅರ್ಜುನ ಆಗಿದ್ದಾರೆ. ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಕೃಷ್ಣನ ಸ್ಥಾನದಲ್ಲಿ ನಿಂತು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ. ಚನ್ನಪಟ್ಟಣ ಚುನಾವಣೆ ಮಹಾಭಾರತದ ಕುರುಕ್ಷೇತ್ರವಾಗಿದೆ ಎಚ್‌ಡಿಕೆ ಗುಡುಗಿದರು.


ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ‌: ಬಸವರಾಜ ಬೊಮ್ಮಾಯಿ


ಧ್ವಜದ ನೆರಳಲ್ಲಿ ಲೂಟಿ ಮಾಡಬಹುದೇ?


ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು ಒಂದು ದಿನವೂ ಧ್ವಜ ಹಾರಿಸಲಿಲ್ಲವೆಂದು ಡಿಕೆಶಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ಕ್ಷೇತ್ರದಲ್ಲಿ ಸುತ್ತಾಡಿ ನೋಡಿದರೆ ಯಾರು ಕೆಲಸ ಮಾಡಿದ್ದಾರೆ ಎನ್ನುವುದು ಗೊತ್ತಾಗಲಿದೆ. ಚನ್ನಪಟ್ಟಣ ಮೂಲಸೌಕರ್ಯದಲ್ಲಿ ಪ್ರಥಮ ಸ್ಥಾನದಲ್ಲಿರುವ ವಿಧಾನಸಭೆ ಕ್ಷೇತ್ರ. ಇದಕ್ಕೆ ಕಾರಣ ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ. ಬೆಂಗಳೂರಿಗೆ ಹೋಲಿಸಿದರೆ ಚನ್ನಪಟ್ಟಣದ ಹಳ್ಳಿಗಳ ರಸ್ತೆಗಳೇ ಚೆನ್ನಾಗಿವೆ ಎಂದು ಟೀಕಿಸಿದರು.


ಇಲ್ಲಿ ಬಾವುಟ ಹಾರಿಸುವುದು ಮುಖ್ಯ ಅಲ್ಲ. ಆದರೆ ನಂಬಿ ಗೆಲ್ಲಿಸಿದ ಜನರ ಋಣ ತೀರಿಸುವುದು ಮುಖ್ಯ. ಇವರು ಬಂದು ಧ್ವಜ ಹಾರಿಸಿ ಭಾಷಣ ಮಾಡಿದರೆ ಜನರ ಹೊಟ್ಟೆ ತುಂಬುವುದಿಲ್ಲ. ಮೇಲ್ನೋಟಕ್ಕೆ ಧ್ವಜಾರೋಹಣ ಮಾಡಿ ಉಳಿದೆಲ್ಲವನ್ನೂ ಲೂಟಿ ಮಾಡಿದರೆ ಹೇಗೆ? ಅಂತಹ ಕೆಲಸವನ್ನು ನಾನು ಮಾಡಿಲ್ಲ. ಹೌದು, ನಾನು ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ಧ್ವಜಕ್ಕೆ ನನ್ನ ಗೌರವ ಸಲ್ಲಿಸಿದ್ದೇನೆ ಎಂದು ಎಚ್‌ಡಿಕೆ ಕಿಡಿಕಾರಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ