2014ಕ್ಕೇ ಮುಗಿದಿದೆ ಆಮದು ಕಾಲ; ಭಾರತ ಇನ್ನೇನಿದ್ರೂ ಆತ್ಮನಿರ್ಭರ: ಸಚಿವ ಪ್ರಲ್ಹಾದ್ ಜೋಶಿ
ಲಕಮಾಪುರದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆ ಇಂದು ಸಾಕಾರಗೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು.
ಹುಬ್ಬಳ್ಳಿ: ಭಾರತ ಆಮದು ಮಾಡಿಕೊಳ್ಳುವ ಕಾಲ 2014ಕ್ಕೇ ಮುಗಿದಿದೆ. ಇನ್ನೇನಿದ್ದರೂ ಸ್ವಾವಲಂಬಿ ದೇಶ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಲಕಮಾಪುರದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆ ಇಂದು ಸಾಕಾರಗೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ: ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ: ಸಿಎಂ ಸಿದ್ದರಾಮಯ್ಯ
ಹಿಂದೊಂದು ಕಾಲವಿತ್ತು. ಏನೇ ಬೇಕಿದ್ದರೂ ನಾವು ಪರ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳಬೇಕಿತ್ತು. ಆದರೆ, ಮೋದಿ ಅವರು ಪ್ರಧಾನಿಯಾದ ಮೇಲೆ ಆಮದು ಸಂಸ್ಕೃತಿಗೆ ಅಂತ್ಯ ಹಾಡುತ್ತಿದ್ದಾರೆ. ನರೇಂದ್ರ ಮೋದಿ ಅವರು ಭಾರತವನ್ನು "ಮೇಕ್ ಇನ್ ಇಂಡಿಯಾ_ಮೇಡ್ ಇನ್ ಇಂಡಿಯಾ" ಆಗಿ ಪರಿವರ್ತಿಸುತ್ತಿದ್ದಾರೆ. ಆತ್ಮ ನಿರ್ಭರ ಮೂಲಕ ದೇಶವನ್ನು ಸಂಪೂರ್ಣ ಸ್ವಾವಲಂಬಿಯಾಗಿ ಮಾಡುತ್ತಿದ್ದಾರೆ ಎಂದರು.
ಆಮದು ನೀತಿಗೆ ಮಹತ್ವ ಕೊಡುತ್ತಿದ್ದ ಕಾಲ 2014ಕ್ಕೇ ಮುಗಿಯಿತು. ಮೋದಿ ಪ್ರಧಾನಿಯಾದ ಮೇಲೆ ದೇಶದ ಸಂಪತ್ತಿನಿಂದಲೇ, ದೇಶವಾಸಿಗಳಿಂದಲೇ ಅಭಿವೃದ್ಧಿ ಸಾಧ್ಯವಿದೆ ಎಂಬುದನ್ನು ಮನಗಂಡು ಅದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಆತ್ಮನಿರ್ಭರ ಅಭಿಯಾನದಡಿ ಕುಶಲಕರ್ಮಿಗಳನ್ನು ಉತ್ತೇಜಿಸುತ್ತಿದ್ದಾರೆ ಎಂದರು.
ರಫ್ತು ಮಾಡುವ ಹಂತಕ್ಕೆ ಬೆಳೆದಿದ್ದೇವೆ: ಭಾರತದಲ್ಲೇ ಉತ್ಪನ್ನಗಳನ್ನು ತಯಾರಿಸಿ ರಫ್ತು ಮಾಡುವ ಹಂತಕ್ಕೆ ನಾವು ಬೆಳೆದಿದ್ದೇವೆ. ಅಮೇರಿಕಾ ಅಧ್ಯಕ್ಷರು ಮೋದಿಯವರಿಗೆ ಕರ್ನಾಟಕದ ಸಿರಿಧಾನ್ಯಗಳ ರಸದೌತಣ ನೀಡಿದ್ದರು ಎಂದು ಜೋಶಿ ನೆನಪಿಸಿದರು.
ಕಲ್ಲಿದ್ದಲು ಆಮದು ಸ್ಟಾಪ್: ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಸಂಪನ್ಮೂಲ ನಮ್ಮಲ್ಲೇ ಸಾಕಷ್ಟಿದ್ದರೂ ಬರೀ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೀಗ ಮೋದಿಯವರ ಸೂಚನೆ ಮೇರೆಗೆ ಕಲ್ಲಿದ್ದಲು ಆಮದನ್ನು ಸಂಪೂರ್ಣ ನಿಲ್ಲಿಸಲು ಯೋಜನೆ ಹೊಂದಿದ್ದೇವೆ ಎಂದು ಜೋಶಿ ತಿಳಿಸಿದರು.
ಕಲ್ಲಿದ್ದಲು ಆಮದಿನಿಂದ ದೇಶದ ಮೇಲೆ ಸಾಕಷ್ಟು ಹೊರೆ ಬೀಳುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಕಲ್ಲಿದ್ದಲು ಉತ್ಪಾದನೆ ಯೋಜನೆಗಳಿಂದಾಗಿ ಇಂದು ದೇಶದ ಮೇಲೆ ಆರ್ಥಿಕ ಹೊರೆ ಬೀಳದಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಇದ್ದಿಲನ್ನು ಈ ಎಣ್ಣೆಯಲ್ಲಿ ಬೆರೆಸಿ ಕೂದಲಿಗೆ ಹಚ್ಚಿ: ಕೇವಲ 10 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗುತ್ತೆ ಬಿಳಿಕೂದಲು
ಪ್ರಧಾನಿ ಮೋದಿ ಅವರು ಪ್ರತಿ ಸನ್ನಿವೇಶಗಳಲ್ಲೂ ಸೂಕ್ತ, ಪ್ರಬುದ್ಧ ನಿರ್ಧಾರ ಕೈಗೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಹಿತ ಕಾಯುತ್ತಿದ್ದಾರೆ. ಇದಕ್ಕಾಗಿ ಮತ್ತೆ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಪ್ರಧಾನಿಯನ್ನಾಗಿ ಮಾಡಿ ಎಂದು ಸಚಿವ ಜೋಶಿ ಮನವಿ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.