ಕೊರಟಗೆರೆ: ವಿಶ್ವವಿದ್ಯಾಲಯಗಳು ಪದವಿ ಪ್ರಧಾನ ಮಾಡುವ ಕೇಂದ್ರಗಳಾಗದೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೇಂದ್ರಗಳಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. 


COMMERCIAL BREAK
SCROLL TO CONTINUE READING

ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕ್ರೀಡಾ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ವಿಶ್ವವಿದ್ಯಾಲಯಗಳು ಕೇವಲ ಪದವಿ ಕೊಡುವ ಸಂಸ್ಥೆಗಳಾಗಿವೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪದವಿ ಹೊಂದಿದ್ದರೂ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ‌ ನಮ್ಮ‌ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಹೊರಬರುತ್ತಿದ್ದಾರೆ. 
ಆದರೆ ಆ ಶಿಕ್ಷಣ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತಿಲ್ಲ. ನಮಗೆ ಉಪಯೋಗವಾಗುವ ಶಿಕ್ಷಣ ಸಿಗಬೇಕು. ಶಿಕ್ಷಣ ಆರ್ಥಿಕ ಸ್ಥಿತಿಗತಿ ಉತ್ತಮ ಪಡಿಸುವಂತಾಗಬೇಕು ಎಂದರು.


ಚೀನಿಯರು ಇತರ ದೇಶದವರಿಗಿಂತ ಮುಂದಿದ್ದಾರೆ. ಆದರೆ ಅವರಿಗೆ ಇಂಗ್ಲಿಷ್ ಬರಲ್ಲ ಎಂಬ ಕಾರಣಕ್ಕೆ ಅವರು ಸ್ಪರ್ಧೆಗೆ ನಿಲ್ಲಲು ಆಗುತ್ತಿಲ್ಲ. ಆದರು ಚೀನಾ ಉದ್ಯಮ ಪಡೆಯುವ ಶಿಕ್ಷಣ ಕೊಡುತ್ತಿದೆ. ಹೀಗಾಗಿ ಉದ್ಯೋಗ ಆಧಾರಿತ ಶಿಕ್ಷಣ ಬಹಳ ಮುಖ್ಯ ಎಂದು ಪರಮೇಶ್ವರ್ ತಿಳಿಸಿದರು.