ಬೆಂಗಳೂರು: ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್(CN Ashwath Narayan) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ(Mysore Gangrape Case)ಸಂಬಂಧ ಸಂಜೆ 6.30ರ ನಂತರ ಹೆಣ್ಣುಮಕ್ಕಳು ಮಾನಸಗಂಗೋತ್ರಿ ಆವರಣದಲ್ಲಿ ಓಡಾಡುವಂತಿಲ್ಲವೆಂದು ಕುಲಪತಿ ಪ್ರೊ.ಆರ್.ಶಿವಪ್ಪ ಸುತ್ತೋಲೆ ಹೊರಡಿಸಿದ್ದರು. ಇದಲ್ಲದೆ ಸಂಜೆ 6.30ರ ಬಳಿಕ ಯಾವುದೇ ವ್ಯಕ್ತಿಗೆ ಕುಕ್ಕರಹಳ್ಳಿ ಕೆರೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು. ಮೈಸೂರು ವಿವಿಯ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.  


ಬೆಂಗಳೂರಿನಲ್ಲಿ ಶನಿವಾರ ಸಿಇಟಿ ಪರೀಕ್ಷಾ ಕೇಂದ್ರ(TET Exam Center)ಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶ್ವತ್ಥ್ ನಾರಾಯಣ್, ‘ಈಗಾಗಲೇ ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಕುಲಪತಿ ಪ್ರೊ.ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ’ ಎಂದರು. ‘ಸಾಮಾನ್ಯವಾಗಿ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳು ಬಹಳ ವಿಶಾಲವಾಗಿರುತ್ತವೆ ಎಂಬುದೇನೋ ನಿಜ. ಹಾಗಂತ ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾದ ವಿವಿ ಕ್ಯಾಂಪಸ್ ಗಳನ್ನು ರೂಪಿಸಬೇಕೆಂದು’ ಎಲ್ಲ ವಿವಿಗಳ ಕುಲಪತಿಗಳಿಗೆ ಸಚಿವರು ಸೂಚಿಸಿದ್ದಾರೆ.  


ಇದನ್ನೂ ಓದಿ: ರಾಜ್ಯದಲ್ಲಿರುವುದು ತಾಲಿಬಾನ್ ಆಡಳಿತ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ


Gangrape) ಘಟನೆ ಖಂಡನೀಯ. ಈ ಘಟನೆ ನಡೆಯಿತು ಎನ್ನುವ ಕಾರಣಕ್ಕೆ ಹೆಣ್ಣುಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ಅವರಿಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳಲ್ಲಿ ಹೆಚ್ಚು ನಿಗಾವಹಿಸುವ  ಕೆಲಸ ಆಗಬೇಕಿದೆ. ಈಗಾಗಲೇ ಆ ಬಗ್ಗೆ ಸರ್ಕಾರದಿಂದ ಕ್ರಮ ವಹಿಸಲಾಗಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.


ವ್ಯಾಪಕ ನಿಗಾ ಇರಿಸುವುದರ ಜೊತೆಗೆ ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಎಲ್ಲ ಕಡೆಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕಾನೂನು-ಸುವವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ದಿಕ್ಕಿನಲ್ಲೂ ತೀವ್ರ ನಿಗಾ ಇಟ್ಟಿರಬೇಕು. ಈ ಬಗ್ಗೆ ಎಲ್ಲ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವರು ಇದೇ ವೇಳೆ ತಿಳಿಸಿದರು.


ಕುಲಪತಿಗಳ ಜತೆ‌ ಚರ್ಚೆ


ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಒಟ್ಟು 32ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿದ್ದು, ಕರ್ನಾಟಕ ಸೇರಿ ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲ ಕಡೆ ಭದ್ರತಾ ವ್ಯವಸ್ಥೆ ಉತ್ತಮವಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.  


ಇದನ್ನೂ ಓದಿ: Heavy Rainfall in Karnataka : ಇಂದು ನಾಳೆ ರಾಜ್ಯದ 9 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್', ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ!


ಲಭ್ಯವಿರುವ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಭದ್ರತೆ ಮತ್ತು ನಿಗಾ ಹೆಚ್ಚಿಸುವ ನಿಟ್ಟಿನಲ್ಲಿ ಏನೇನು ಮಾಡಬಹುದು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುತ್ತೇನೆ. ಸಂಬಂಧಿತ ಇಲಾಖೆ ಹಾಗೂ ಎಲ್ಲ ಕುಲಪತಿಗಳ ಜೊತೆ ಚರ್ಚೆ ನಡೆಸುತ್ತೇನೆ ಎಂದರು. ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳು. ಪಾತಕಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಇದೇ ವೇಳೆ ಅಶ್ವತ್ಥ್ ನಾರಾಯಣ್ ತಿಳಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ