ಬೆಂಗಳೂರು : ಕಾಲೇಜಿನ ಮಹಿಳಾ ಶೌಚಾಲಯದ ಒಳನುಗ್ಗಿದ ಕಿಡಿಗೇಡಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ‌. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ವಿಜಯಾ ಕಾಲೇಜಿನ‌ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿಕೊಂರಿರುವ ಪೊಲೀಸರು ಅಪರಿಚಿತನಿಗಾಗಿ  ಬಲೆ ಬೀಸಿದ್ದಾರೆ. ಮತ್ತೊಂದೆಡೆ ಕಿಡಿಗೇಡಿ ಬಂಧನಕ್ಕಾಗಿ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಬೆಳಗ್ಗೆ ಸುಮಾರು 8 ಗಂಟೆಗೆ ವಿಜಯಾ ಕಾಲೇಜಿನ ಮಹಿಳಾ ಶೌಚಾಲಯದ ಒಳಗೆ ಅಪರಿಚಿತ ಯುವಕ ಇರುವುದು ಗೊತ್ತಾಗಿದೆ.


ಇದನ್ನೂ ಓದಿ: ಮೆಟ್ರೋ ಪಿಲ್ಲರ್ ದುರಂತ: ನಿರ್ಮಾಣ ಕಂಪನಿ ಸೇರಿ BMRCLನ 8 ಜನರ ವಿರುದ್ಧ FIR!


ಯುವತಿಯನ್ನು ನೋಡುತ್ತಿದ್ದಂತೆ ಕೂಡಲೇ ಕಾಮುಕ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಆತಂಕಕ್ಕೊಳಗಾದ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡಿದ್ದಾಳೆ‌. ಇದರಿಂದ ಗಾಬರಿಯಾದ ವ್ಯಕ್ತಿ ಶೌಚಾಲಯದ ಬಾಗಿಲು ಹಾಕಿ ಎಸ್ಕೇಪ್ ಆಗಿದ್ದಾನೆ. ಕಾಲೇಜಿನ ಲೇಡಿಸ್ ಟಾಯ್ಲೆಟ್‌ಗೆ‌‌‌ ನುಗ್ಗಿ ಅಸಭ್ಯ ವರ್ತನೆ ತೋರಿದ್ದ ಆರೋಪಿಯನ್ನು ಬಂಧಿಸಬೇಕು ಎಂದು ದೂರು ಸಲ್ಲಿಸಲಾಗಿದೆ. ಸದ್ಯ ವಿಕೃತಿ ಮೆರೆದವನನ್ನು ಬಂಧಸಬೇಕು ಎಂದು ಆಗ್ರಹಿಸಿ ವಿಜಯಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.