ಬೆಂಗಳೂರು : ರಾಜ್ಯ ಸರ್ಕಾರ ಈಗಾಗಲೇ ನಿನ್ನೆಷ್ಟೇ ಕೊರೋನಾ ಪಾಸಿಟಿವಿಟಿ ದರ ಕಡಿಮೆಗೊಂಡಿದ್ದಂತ 6 ಜಿಲ್ಲೆಗಳಲ್ಲಿ, ಮತ್ತೆ ಕೊರೋನಾ ಅನ್ ಲಾಕ್ 2.0 ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿತ್ತು. 


COMMERCIAL BREAK
SCROLL TO CONTINUE READING

ಇದೀಗ ಮತ್ತೆ ಕೊರೋನಾ ಪಾಸಿಟಿವಿಟಿ ದರ ಕಡಿಮೆಗೊಂಡಿರುವಂತ ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅನ್ ಲಾಕ್ 2.O(Unlock 2.O) ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿದೆ.


ಇದನ್ನೂ ಓದಿ : BS Yediyurappa : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿ ಸುದ್ದಿ..!


ಈ ಕುರಿತಂತೆ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು ಅಧಿಸೂಚನೆ ಹೊರಡಿಸಿದ್ದು, ಕೊರೋನಾ(Corona Case) ಪ್ರಕರಣಗಳು ಕಡಿಮೆಗೊಂಡಿರುವಂತ ಜಿಲ್ಲೆಗಳಾದಂತ ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆ 6 ಗಂಟೆಯಿಂದ 1 ಗಂಟೆಯವರೆಗೆ ತೆರೆಯಲು ಅವಕಾಶ ನೀಡಿ, ಅನ್ ಲಾಕ್ 2.0 ಮಾರ್ಗಸೂಚಿ ಜಾರಿಗೊಳಿಸಲಾಗಿದೆ.


ಇದನ್ನೂ ಓದಿ : Reopen School-College : ರಾಜ್ಯದಲ್ಲಿ 'ಶಾಲಾ-ಕಾಲೇಜು' ಆರಂಭದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು!


ಈ ಜಿಲ್ಲೆಗಳಲ್ಲಿ ಏರ್ ಕಂಡೀಷನ್ ಶಾಪ್ಸ್(Air Conditioner Shop), ಏರ್ ಕಂಡೀಷನ್ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಮಾಲ್ಕ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ. ಈ ಆದೇಶವು ಜುಲೈ 5, 2021ರವರೆಗೆ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ : Interstate Bus Travel : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.