ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಅನ್ ಲಾಕ್ 3.O  ಘೋಷಣೆ ಮಾಡಲಾಗಿದೆ. ಯಾವುದಕ್ಕೆಲ್ಲಾ ಅನುಮತಿ ಯಾವುದಕ್ಕಿಲ್ಲ ಎಂಬುದು ಇಲ್ಲಿದೆ. ಈ ನಿಯಮಗಳು ನಾಳೆಯಿಂದ ಜುಲೈ 19ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.


COMMERCIAL BREAK
SCROLL TO CONTINUE READING

1. ಮದುವೆ(Weddings) ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.


2. ನೈರ್ಟ್ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.


ಇದನ್ನೂ ಓದಿ : ಶುದ್ಧ ವಾಯುಗುಣದಲ್ಲಿ ಗದಗ ಮತ್ತೊಮ್ಮೆ ದೇಶಕ್ಕೆ ನಂಬರ್ 1..!


3. ವೀಕೆಂಡ್ ಕರ್ಫ್ಯೂ(Night Curfew) ಜಾರಿಯಲ್ಲಿರುವುದಿಲ್ಲ.


4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.


5. ಈಜುಕೊಳ(Swimming Pool)ಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.


6. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.


ಇದನ್ನೂ ಓದಿ : Karnataka in Unlock 3.O : ಜು.5 ರಿಂದ ರಾಜ್ಯದಲ್ಲಿ ಅನ್​ಲಾಕ್ 3.O? ಇಂದು ಸಿಎಂ ನೇತೃತ್ವದಲ್ಲಿ ಸಭೆ


7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.


8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.


9. ಮಾಲ್‌ಗಳನ್ನುತೆರೆಯಲು ಅವಕಾಶ ನೀಡಲಾಗಿದೆ.


10. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.


ಇದನ್ನೂ ಓದಿ : Heavy Rainfall : ರಾಜ್ಯದ ಬಹುತೇಕ ಕಡೆ ಇನ್ನೂ 3 ದಿನ ಭಾರೀ ಮಳೆ..!


11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.


12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.


ಇದನ್ನೂ ಓದಿ : ಚರಕದಿಂದ ಶ್ರಮ ಸಂಸ್ಕೃತಿಗೆ ಹೊಸ ವ್ಯಾಖ್ಯಾನ


13. ಪಬ್ ಮತ್ತು ಬಾರ್ ಗಳಿಗೆ ಅವಕಾಶ ನೀಡಲಾಗಿದೆ.


14. ಸಿನಿಮಾ ಥೇಟರ್ ಗಳಿಗೆ ಅವಕಾಶವಿಲ್ಲ.


ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.