ಬೆಂಗಳೂರು :  ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿರುವ ಭಾರತ ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ   ಸಾಧನೆಗಳನ್ನು ಮಾಡುವ ಅವಕಾಶಗಳನ್ನು ಹೊಂದಿದೆ ಎಂದು 
ಪ್ರಧಾನಮಂತ್ರಿ  ನರೇಂದ್ರ ಮೋದಿ  ಹೇಳಿದ್ದಾರೆ. ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ “ಇಂಡಿಯನ್ ಎನರ್ಜಿ ವೀಕ್-2023”ಅನ್ನು ಉದ್ಘಾಟಿಸಿದ್ದಾರೆ. 


COMMERCIAL BREAK
SCROLL TO CONTINUE READING

ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದ್ದು, ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಅತ್ಯಂತ ಮುಂದುವರೆದ  ರಾಷ್ಟ್ರಗಳ ಪೈಕಿ ಒಂದಾಗಿದೆ ಎಂದು  ಹೇಳಿದ್ದಾರೆ. 


ಇದನ್ನೂ ಓದಿ : ಮೈಲಾರಲಿಂಗೇಶ್ವರ ಕಾರ್ಣಿಕ : ಭಾಗ್ಯದ ನಿಧಿ ತುಂಬಿ ತುಳುಕಿತ್ತಲೇ ಪರಾಕ್ ಎಂದು ನುಡಿದ ಗೊರವಯ್ಯ ....! 


ದೇಶದಲ್ಲಿ ಹೊಸ ನಗರಗಳ ಸೃಷ್ಟಿ : 
ಭಾರತದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದೆ. ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಅಭಿವೃದ್ದಿಯನ್ನು ಗಮನಿಸುತ್ತಿದ್ದರೆ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ ಎನ್ನುವುದನ್ನು ತೋರಿಸುತ್ತದೆ.  ಭಾರತದಲ್ಲಿ ಇಂಧನದ ಬೇಡಿಕೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿವೆ ಎಂದು ಹೇಳಿದ್ದಾರೆ.


ಗ್ರಾಮೀಣ ಪ್ರದೇಶದಲ್ಲಿಯೂ ಇಂಟರ್ ನೆಟ್ : 
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಪೂರಕವಾಗುವ ಕ್ರಮಗಳನ್ನು ಜಾರಿಗೆ ತರಲಾಗಿದ್ದು, ಭಾರತದಲ್ಲಿ ಇಂದು ಜನರೂ ಬದುಕುವ ರೀತಿ ಬದಲಾಗಿದೆ. ಹಳ್ಳಿಹಳ್ಳಿಗಳ ಮನೆ ಬಾಗಿಲಿಗೆ ಇಂಟರ್ನೆಟ್​ ತಲುಪಿದೆ. ಇಂಟರ್ನೆಟ್ ಬಳಕೆ ಪ್ರಮಾಣ 3 ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.  ಮೊಬೈಲ್ ಫೋನ್ ಉತ್ಪಾದನೆಯಲ್ಲಿಯೂ ಭಾರತ ಮುಂದೆ ಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಆರ್ಥಿಕವಾಗಿಯೂ ಭಾರತ ಮುಂದುವರೆಯುತ್ತಿದ್ದು, ಬಡವರ್ಗದಲ್ಲಿದ್ದವರು ಮಧ್ಯಮವರ್ಗಕ್ಕೆ  ಏರುತ್ತಿದ್ದಾರೆ ಎಂದು ತಿಳಿಸಿದ್ದಾರೆ. 


ಸಿಎನ್​ಜಿ ಸ್ಟೇಷನ್​ಗಳ ಸಂಖ್ಯೆಯಲ್ಲಿ ಹೆಚ್ಚಳ :  
ಕೇವಲ 900  ಇದ್ದ ಸಿಎನ್​ಜಿ ಸ್ಟೇಷನ್​ಗಳ ಸಂಖ್ಯೆ ಇದೀಗ  5000ಕ್ಕೆ  ಏರಿವೆ. ಗ್ಯಾಸ್​ ಪೈಪ್​ಲೈನ್ ಜಾಲ ವಿಸ್ತರಿಸುವ ಕೆಲಸ ಆಗುತ್ತಿದೆ.  ಶೀಘ್ರದಲ್ಲಿಯೇ ಗ್ಯಾಸ್​ ಪೈಪ್​ಲೈನ್ ವ್ಯಾಪ್ತಿ 35 ಸಾವಿರ ಕಿಮೀ ದಾಟಲಿದ ಎಂದಿದ್ದಾರೆ. 2030ರ ಹೊತ್ತಿಗೆ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುವುದಾಗಿ ಪ್ರಧಾನ ಮಂತ್ರಿ ಘೋಷಿಸಿದ್ದಾರೆ. 


ಇದನ್ನೂ ಓದಿ : HPSC ವೈದ್ಯಕೀಯ ಅಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ....


ಇವಿ ಬ್ಯಾಟರಿ  ಬ್ಯಾಟರಿ ಉತ್ಪಾದನೆಗೆ ಪ್ರೋತ್ಸಾಹ :
ಇವಿ ಬ್ಯಾಟರಿಗಳ ದರ ಕಡಿಮೆ ಮಾಡುವ ಉದ್ದೇಶದಿಂದ ದೇಶದಲ್ಲಿ ಬ್ಯಾಟರಿ ಉತ್ಪಾದನೆಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಲಾಗಿದೆ. ಈ ದಶಕದ ಅಂತ್ಯದಲ್ಲಿ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಅರ್ಧದಷ್ಟನ್ನು ಪರಿಸರಸ್ನೇಹಿ ಮೂಲಗಳಿಂದಲೂ ಉತ್ಪಾದಿಸುವ ಗುರಿ  ಹೊಂದಿರುವುದಾಗಿ ಹೇಳಿದ್ದಾರೆ. 


ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಆರ್.ಕೆ. ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.  


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.