ಬೆಂಗಳೂರು: ಅನೇಕ ತಿಂಗಳುಗಳಿಂದ ಖಾಲಿ ಇದ್ದ ಕರ್ನಾಟಕ ಲೋಕಾಯುಕ್ತ  ಹುದ್ದೆ ಕೊನೆಗೂ ಭರ್ತಿಯಾಗಿದೆ. ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಲೋಕಾಯುಕ್ತರಾಗಿದ್ದ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಸುಮಾರು 5 ತಿಂಗಳುಗಳ ಕಾಲ ಈ ಹುದ್ದೆ ಖಾಲಿ ಇತ್ತು. ಇದೀಗ ಈ ಹುದ್ದೆಗೆ 2019ರ ನವೆಂಬರ್‍ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಪಾಟೀಲ್‍ರನ್ನು ನೇಮಕ ಮಾಡಲಾಗಿದೆ.


ಕುಡಿದ ಮತ್ತಲ್ಲಿ ಮೊಬೈಲ್ ವಿಷಯಕ್ಕೆ ಗಲಾಟೆ, ವ್ಯಕ್ತಿಗೆ ಚಾಕು ಇರಿತ


ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೈಕೋರ್ಟ್ ಮುಖ್ಯ ನಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷದ ನಾಯಕ ಜೊತೆಗೆ ಈ ಬಗ್ಗೆ ಸಮಾಲೋಚಿಸಿದ ಬಳಿಕ ಬಿ.ಎಸ್.ಪಾಟೀಲರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆ ರಾಜ್ಯಪಾಲರು ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.


2019ರ ನವೆಂಬರ್ 20ರಂದು ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದ ಬಿ.ಎಸ್.ಪಾಟೀಲ್ ನ.22ರಂದು ಅಧಿಕಾರ ಸ್ವೀಕರಿಸಿದ್ದರು. ರಾಜ್ಯದಲ್ಲಿ ಉಪ ಲೋಕಾಯುಕ್ತರ ಹುದ್ದೆಯಿಂದ ಲೋಕಾಯುಕ್ತರಾಗಿ ಪದನ್ನೋತಿ ಪಡೆಯುತ್ತಿರುವ ಮೊದಲಿಗರು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ರಾಜಭವನದ ಗಾಜಿ ಮನೆಯಲ್ಲಿ ಬುಧವಾರ ಬೆಳಗ್ಗೆ 9.45ಕ್ಕೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಾಗಿ ಆಯ್ಕೆಯಾಗಿರುವ ಬಿ.ಎಸ್.ಪಾಟೀಲರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.  


ಇದನ್ನೂ ಓದಿ: ದಿ ಪಾರ್ಕ್ ಹೊಟೇಲ್‌ನಲ್ಲಿ ಆ ರಾತ್ರಿ ನಡೆದಿದ್ದು ರೇವ್ ಪಾರ್ಟಿನಾ! FIR ನಲ್ಲಿ ಏನಿದೆ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.