ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ

CM Siddaramaiah: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ  ವೈದ್ಯಕೀಯ ಶಿಕ್ಷಣ ಜೀವನೋಪಾಯ  ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. 

Written by - Savita M B | Last Updated : Feb 16, 2024, 12:24 PM IST
  • ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ
  • ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ
  • ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ title=

Dr. Sharan Prakash Patil: ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ  ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. 
 
ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ  ಮತ್ತು ಉಪಕರಣಗಳ ಖರೀದಿಗಾಗಿ ರೂ. 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ  ರೂ. 350 ಕೋಟಿ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ  ಉನ್ನತೀಕರಿಸಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದು ಪಾಟೀಲ್ ಹೇಳಿದ್ದಾರೆ. 

ಇದನ್ನೂ ಓದಿ-ಮಾರ್ಚ್‌ 31ರೊಳಗೆ 2.95 ಲಕ್ಷ ಎಪಿಎಲ್ ಅರ್ಜಿಗಳ ವಿಲೇವಾರಿಗೆ ಕ್ರಮ
 
ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಬೆಂಗಳೂರು ಇವರ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ.
 
ಗದಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಹೇಳಿದ್ದಾರೆ. 
 
ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ  ಚಿಕಿತ್ಸೆ ನೀಡಲು ಕ್ರಮ. 
 
ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಓಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ. 
 
ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64  ಅನೇಸ್ತೇಷಿಯಾ   ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ  ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ  ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆ ಎಂದು ಪಾಟೀಲ್‌ ಹೇಳಿದ್ದಾರೆ. 

ಇದನ್ನೂ ಓದಿ-Karnataka Budget 2024:ಒಲಿಂಪಿಕ್, ಕಾಮನ್ ವೆಲ್ತ್ ವಿಜೇತರಿಗೆ ಭರ್ಜರಿ ಘೋಷಣೆ

ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ  ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ. 
 
ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News