ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಅಳವಡಿಸಬೇಕಿದ್ದು, ಎಲ್ಲರೂ ಅದನ್ನು ಅನುಷ್ಠಾನಗೊಳಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಯ ಪ್ರತಿನಿಧಿಗಳಿಗೆ ತಿಳಿಸಿದರು. 


COMMERCIAL BREAK
SCROLL TO CONTINUE READING

ಬೆಂಗಳೂರು ಅಭಿವೃದ್ಧಿ ಹಾಗೂ ನಾಗರಿಕ ಸಮಸ್ಯೆಗಳ ಕುರಿತು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(FKCCI)ಯು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಈಗಾಗಲೇ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ಗಳಲ್ಲಿನ 40 ಅಡಿ ರಸ್ತೆಗಳಲ್ಲಿರುವ ಮಳಿಗೆಗಳನ್ನು ಸರ್ವೇ ಮಾಡಿ ತಿಳುವಳಿಕೆ ಪತ್ರ ನೀಡಿ ನಾಮಫಲಕಗಳನ್ನು ಬದಲಾವಣೆ ಮಾಡಲು ಸೂಚನೆ ನೀಡಲಾಗಿದೆ. ಅದರಂತೆ ಈಗಾಗಲೇ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಅಳವಡಿಸುವ ಕಾರ್ಯ ‌ನಗರದಾದ್ಯಂತ ಸಕ್ರಿಯವಾಗಿ ನಡೆಯುತ್ತಿದ್ದು, ಫೆಬ್ರವರಿ 28 ರೊಳಗಾಗಿ ಎಲ್ಲಾ ಮಳಿಗೆಗಳು ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಾಗುತ್ತಿದೆ ಎಂದು ಹೇಳಿದರು. 


ನಗರಲ್ಲಿ ಸಾಕಷ್ಟು ಕೈಗಾರಿಕೆಗಳು ಬರಲಿದ್ದು, ಎಲ್ಲಾ ಕೈಗಾರಿಕೆಗಳು ನಿಯಮಗಳನ್ನು ತಪ್ಪದೆ ಪಾಲನೆ ಮಾಡಿ ಕೂಡಲೆ ಶೇ. 60 ರಷ್ಟು ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅಳವಡಿಸಿಕೊಳ್ಳಬೇಕು. ಫೆಬ್ರವರಿ 28 ರವರೆಗೆ ಅವಕಾಶ ನೀಡಿದ್ದು, ಆ ವೇಳೆಗೆ ಎಲ್ಲರೂ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. 


ಆಸ್ತಿ ತೆರಿಗೆ ಸಂಗ್ರಹವೇ ಪ್ರಮುಖ ಆದಾಯ ಮೂಲ:


ಪಾಲಿಕೆಗೆ ಆಸ್ತಿ ತೆರಿಗೆ ಸಂಗ್ರಹವೇ ಪ್ರಮುಖ ಆದಾಯ ಮೂಲವಾಗಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪಾಲಿಕೆ ಆಸ್ತಿ ತೆರಿಗೆ ಪಾವತಿಸದೆ ಉಳಿಸಿಕೊಂಡವರಿಗೆ, ಸ್ವಯಂ ಆಸ್ತಿ ತೆರಿಗೆ ಪದ್ದತಿಯಲ್ಲಿ ಸರಿಯಾಗಿ ಘೋಷಿಸಿಕೊಳ್ಳದಿರುವರಿಗೆ ಡಿಮಾಂಡ್ ನೋಟಿಸ್ ನೀಡುವುದು ಹಾಗೂ ಮೊಬೈಲ್ ಗೆ ಸಂದೇಶ ಕಳುಹಿಸುವ ಮೂಲಕ ತೆರಿಗೆ ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ ಎಂದರು.


ಪ್ರತಿ ವಾರ್ಡ್ ಗೆ 1 ಕೋಟಿ ‌ರೂ. ಮೀಸಲು:


ನಗರದ ಎಲ್ಲಾ ವಾರ್ಡ್ಗಳಿಗೆ ಶಿಲ್ಟ್ ಅಂಡ್ ಟ್ರಕ್ ವ್ಯವಸ್ಥೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ವಾರ್ಡ್ ಗೆ 1 ಕೋಟಿ ರೂ. ಮೀಸಲಿಟ್ಟು, 30 ಲಕ್ಷ ರೂ. ಶಿಲ್ಟ್ ಅಂಟ್ ಟ್ರಕ್ ಗೆ, 30 ಲಕ್ಷ ರೂ. ಬೃಹತ್ ನೀರುಗಾಲುವೆ ಸ್ವಚ್ಛತೆಗಾಗಿ, ಪಾದಚಾರಿ ಮಾರ್ಗಕ್ಕೆ 40 ಲಕ್ಷ ರೂ. ನೀಡಲಾಗುವುದು ಎಂದರು. 


ರಸ್ತೆಗಳ ಅಭಿವೃದ್ಧಿಗೆ ಆದ್ಯತೆ:


ನಗರದಲ್ಲಿ ಬರುವ ಪೀಣ್ಯ ಕೈಗಾರಿಕಾ ಪ್ರದೇಶ, ನಗರ ಕೇಂದ್ರ ಭಾಗದಲ್ಲಿ ಬರುವ ಎಸ್.ಪಿ ರಸ್ತೆ, ಮಾಮೂಲ್ ಪೇಟೆ, ತರಗುಪೇಟೆ, ಸುಲ್ತಾನ್ ಪೇಟೆ ಸೇರಿದಂತೆ ಇನ್ನಿತರೆ ರಸ್ತೆಗಳನ್ನು ಆದ್ಯತೆ ಮೇರೆಗೆ ತೆಗೆದುಕೊಂಡು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. 


ಸಹಾಯ 2.0 ಸರಿಯಾಗಿ ಕೆಲಸ ಮಾಡುತ್ತಿದೆ:


ಬಿಬಿಎಂಪಿಯಲ್ಲಿ ಈ ಹಿಂದೆ ದೂರುಗಳನ್ನು ಸ್ವೀಕರಿಸುತ್ತಿದ್ದ ಸಹಾಯ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದೀಗ ಪಾಲಿಕೆ ಸಹಾಯವಾಣಿ ಸಂಖ್ಯೆ 1533 ಮೂಲಕ ಬರುವ ದೂರುಗಳನ್ನು ಸಹಾಯ 2.0ರಲ್ಲಿ ಕಾಲಮಿತಿಯೊಳಗಾಗಿ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸಲಾಗುತ್ತಿದೆ. ವಲಯವಾರು ವರ್ಗೀಕರಣ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ರವಾನಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ ಎಂದರು.


ಕೈಗಾರಿಕ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿ, ಬೀದಿ ದೀಪ ನಿರ್ವಹಣೆ, ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ನೀಡಿದ್ದೀರಾ, ಆ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಂಡು ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.


ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಧ್ಯಕ್ಷರಾದ ರಮೇಶ್ ಚಂದ್ರ ಲಹೊಟಿ ಮಾತನಾಡಿ, ನಗರದಲ್ಲಿರುವ ಕೈಗಾರಿಕಾ ಪ್ರದೇಶಗಳಿಂದ ಬಿಬಿಎಂಪಿಗೆ ಸಾಕಷ್ಟು ತೆರಿಗೆಯನ್ನು ಪಾವತಿ ಮಾಡಲಾಗುತ್ತಿದೆ. ಆದರೆ, ನಮ್ಮ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಮ್ಮಲ್ಲಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಿದರು.
 
ಸಭೆಯಲ್ಲಿ ಬಂದ ಪ್ರಮುಖ ಸಲಹೆಗಳು:


• ಕೈಗಾರಿಕಾ ಪ್ರದೇಶಗಲ್ಲಿ ಬರುವ ರಸ್ತೆಗಳನ್ನು ಸರಿಯಾಗಿ ಅಭಿವರದ್ಧಿ ಮಾಡುವುದು.
• ಇಲಾಖೆಗಳ ಸಮನ್ವಯದ ಕೊರತೆಯಿದ್ದು, ಅದನ್ನು ಬಗೆಹರಿಸುವುದು. 
• ಕೆ.ಆರ್ ಮಾರುಕಟ್ಟೆ ಬಳಿ ಪಾದಚಾರಿಗಳ ಅತಿಕ್ರಮಣವನ್ನು ತಡೆಯಬೇಕು. 
• ಕೈಗಾರಿಕಾ ಪ್ರದೇಶಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿ ಮಾಡುವುದು. 
• ಸಾರಕ್ಕಿ ಮೆಟ್ರೊ ನಿಲ್ದಾಣದ ಬಳಿ ಸಂಚಾರ ದಟ್ಟಣೆ ಸಮಾಸ್ಯೆ ನಿವಾರಿಸುವುದು. 
• ಅಪಾಯ ಸ್ಥಿತಿಯಲ್ಲಿರುವ ಮರದ ಕೊಂಬೆಗಳ ಕಟಾವು ಮಾಡುವುದು.
• ಉದ್ದಿಮೆ ಪರವಾನಗಿಯನ್ನು ಸರಿಯಾಗಿ ನೀಡುವುದು.


ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಂ.ಜಿ ಬಾಲಕೃಷ್ಣ, ಉಪಾಧ್ಯಕ್ಷೆಯಾ ಉಮಾ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.