ನಾಳೆ ಹುಬ್ಬಳ್ಳಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಬಿಜೆಪಿಯ ಪರಿವರ್ತನಾ ಯಾತ್ರೆಯ 50ನೇ ದಿನದ ಸಂಭ್ರಮಾಚರಣೆಯ ನಿಮಿತ್ತ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹುಬ್ಬಳ್ಳಿಗೆ ಆಗಮನ.

Updated: Dec 20, 2017 , 08:29 AM IST
ನಾಳೆ ಹುಬ್ಬಳ್ಳಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಳೆ(ಡಿ. 21) ಹುಬ್ಬಳ್ಳಿಗೆ ಬರಲಿದ್ದಾರೆ ಎಂದು ಬಿಜೆಪಿ ಮೂಲಗಳು ದೃಢಪಡಿಸಿವೆ.

ಬಿಜೆಪಿಯ ಪರಿವರ್ತನಾ ಯಾತ್ರೆಯ 50ನೇ ದಿನದ ಸಂಭ್ರಮಾಚರಣೆಯ ನಿಮಿತ್ತ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯ ಸಲುವಾಗಿ ಪಕ್ಷದ ಪರ ಪ್ರಚಾರಕ್ಕಾಗಿ ಯೋಗಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಯೋಗಿ ಭೇಟಿಯಿಂದ ಬಿಜೆಪಿಗೆ ವೋಟ್ ಬ್ಯಾಂಕ್ ಸಿಗುವುದೇ ಎಂದು ಕಾದುನೋಡಬೇಕಿದೆ.

ಡಿ.21 ರ ಗುರುವಾರ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಧ್ಯಾಹ್ನ 3ಗಂಟೆಗೆ ಪರಿವರ್ತನಾ ಯಾತ್ರೆಯಲ್ಲಿ ಯೋಗಿ ಪಾಲ್ಗೊಳ್ಳಲಿದ್ದಾರೆ.