Uttara Kannada: ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಆಸ್ಪತ್ರೆಗೆ ದಾಖಲು

ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಅವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿಗತಿ ವಿಚಾರಿಸಿದರು.

Written by - Zee Kannada News Desk | Last Updated : Dec 28, 2021, 07:41 PM IST
  • 20 ಕ್ಕೂ ಹೆಚ್ಚು ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ
  • ಉತ್ತರಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಘಟನೆ
  • ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿಗತಿ ವಿಚಾರಿಸಿದ ಕಾರವಾರ ಶಾಸಕಿ ರೂಪಾಲಿ ನಾಯ್ಕ್
Uttara Kannada: ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಆಸ್ಪತ್ರೆಗೆ ದಾಖಲು title=
ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಕಾರವಾರ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ(Bee Attack)ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್‌ ವ್ಯಾಪ್ತಿಯಲ್ಲಿ‌ ನಡೆದಿದೆ. ಜೇನು ಕಡಿತದಿಂದ ಸುಮಾರು 16 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಅಸ್ವಸ್ಥರಾಗಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನ ಮರದಲ್ಲಿ ಗೂಡು ಕಟ್ಟಿದ್ದ ಜೇನುನೊಣಗಳು ಏಕಾ-ಏಕಿ ದಾಳಿ ನಡೆಸಿವೆ. ಪರಿಣಾಮ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ಕಡಿದಿವೆ. ಕೂಡಲೇ 16 ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆ(Students Injured)ಗೆ ದಾಖಲಿಸಲಾಯಿತು. ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಜೇನು ಕಚ್ಚಿದ್ದು, ಗಂಭೀರ ಗಾಯಗೊಂಡ ಇವರನ್ನು ಕೂಡ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: DK Shivakumar: ಡಿ.ಕೆ.ಶಿವಕುಮಾರ್ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗೆ ಶಾಕ್..!

ಶಾಲಾ ಕಂಪೌಂಡ್‌ಗೆ ಹೊಂದಿಕೊಂಡೇ ಇದ್ದ ಜೇನುಗೂಡು

ಶಾಲೆಯ ಕಂಪೌಂಡ್‌ಗೆ ಹೊಂದಿಕೊಂಡೇ ಇದ್ದ ಜೇನುಗೂಡು ಶಾಲಾ ಆವರಣದಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿ ಕಚ್ಚಿವೆ(Bee Attack). ವಿದ್ಯಾರ್ಥಿಗಳಿಗೆ ಮೊದಲು ಕಿನ್ನರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಾಸಕಿ ರೂಪಾಲಿ ನಾಯ್ಕ್ ಆಸ್ಪತ್ರೆಗೆ ಭೇಟಿ

ಇನ್ನು ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ್(Roopali Naik) ಅವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿಗತಿ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಕ್ಕಳ ಮೇಲೆ ದಾಳಿ ಮಾಡಿರುವ ಜೇನು ಹೆಚ್ಚಿನ ಹಾನಿ ಮಾಡಿದೆ. ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆಗೂ ಸಹ ಸೂಚನೆ ನೀಡಲಾಗಿದ್ದು, ಶಾಲಾ ಆವರಣದಲ್ಲಿ ಇರುವ ಜೇನನ್ನು ತೆರವುಗೊಳಿಸಲು ತಿಳಿಸಲಾಗಿದೆ ಎಂದರು.

ಇದನ್ನೂ ಓದಿ: ಅಧಿಕಾರಕ್ಕೆ ಬರುವ ಭ್ರಮೆಯಲ್ಲಿರುವ ಸಿದ್ದರಾಮಯ್ಯ: ಸಚಿವ ವಿ.ಸುನೀಲ್ ಕುಮಾರ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News